ರಾಯಚೂರಿನಲ್ಲಿ ಹಾಡಹಗಲೇ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರ ದಾಳಿ ನಡೆಸಿ ಕೊ** | Raichur

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
Raichur: ಹಾಡುಹಗಲೇ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ಮಂಗಳವಾರ(ಆ. 04) ಸಂಜೆ ನಡೆದಿದೆ.
ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಭೂಮಾನಂದ (28) ಕೊಲೆಯಾದ ಪರಿಶಿಷ್ಟ ಸಮುಯದಾಯದ ಯುವಕ. ಬಿಎಸ್​ಪಿ ಪಕ್ಷದಲ್ಲಿ ಸಕ್ರಿಯನಾಗಿದ್ದ ಎನ್ನಲಾಗಿದೆ. ಕೊಲೆ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ತಕ್ಷಣಕ್ಕೆ ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಕೊಲೆಯ ಭೀಕರತೆಗೆ ಗ್ರಾಮವೇ ಬೆಚ್ಚಿಬಿದ್ದಿದ್ದು, ಸ್ಥಳಕ್ಕೆ ಗಬ್ಬೂರು ಠಾಣೆ ಪೊಲೀಸರು ಭೇಟಿ‌ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net