ಅಬ್ದುಲ್ ಜಬ್ಬಾರ್ ಅಮಾನತು ವಾಪಸ್?: ಸುಳಿವು ನೀಡಿದ ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಈಗಲೇ ಕ್ರಮ ತೆಗೆದುಕೊಳ್ಳುವುದು ಸರಿಯಲ್ಲ
ಸಿಎಂರಿಂದ ಹೊಂದಾಣಿಕೆ ರಾಜಕೀಯ
ಮೈಸೂರು: ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಪಕ್ಷದಿಂದ ಅಮಾನತು ವಾಪಸ್ ಪಡೆಯುವ ಕುರಿತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸುಳಿವು ನೀಡಿದರು.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಬಹಳಷ್ಟು ಜನ ಸಸ್ಪೆಂಡ್ ಆದವರು ಮತ್ತೆ ವಾಪಸ್ ಬಂದಿದ್ದಾರೆ. ಜಬ್ಬಾರ್ ಕೂಡ ವಾಪಸ್ ಬರುತ್ತಾರೆ ಎಂದು ಹೇಳಿದರು.
ದಾವಣಗೆರೆ ಉಪಚುನಾವಣೆ ವಿಚಾರವಾಗಿ ಮುಸ್ಲಿಂ ನಾಯಕರಿಗೆ ನೋಟಿಸ್ ಕೊಡುವುದನ್ನು ಮೊದಲು ನಿಲ್ಲಿಸಬೇಕು. ಫಲಿತಾಂಶ ಬರುವವರೆಗೂ ಕಾಯಬೇಕು. ಅಷ್ಟರಲ್ಲೇ ನೋಟಿಸ್ ಕೊಡುವುದು, ಸಸ್ಪೆಂಡ್ ಮಾಡುವುದು ಸರಿಯಲ್ಲ. ಇದು ಮುಸ್ಲಿಂ ಮತ ಬ್ಯಾಂಕ್ ಮೇಲೆ ಪರಿಣಾಮ ಬೀರುತ್ತದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಮೊದಲು ಚುನಾವಣೆಯ ಫಲಿತಾಂಶ ಬರಲಿ. ಯಾರದ್ದು ತಪ್ಪಾಗಿದೆ ಎಂದು ಪರಿಶೀಲಿಸಿ ಬಳಿಕ ಕ್ರಮ ತೆಗೆದುಕೊಳ್ಳಬಹುದು. ಈಗಲೇ ಕ್ರಮ ತೆಗೆದುಕೊಳ್ಳುವುದು ಸರಿಯಲ್ಲ. ಯಾರು ಪಕ್ಷ ವಿರೋಧಿ ಚಟುವಟಿಕೆ ಮಾಡಿದರು, ಯಾವ ರೀತಿ ಮಾಡಿದರು ಎಂಬ ಬಗ್ಗೆ ಚರ್ಚೆ ಮಾಡುವ ಸಮಯ ಇದಲ್ಲ. ಮೊದಲು ಫಲಿತಾಂಶ ಬರಲಿ ಎಂದು ಹೇಳಿದರು.
ಸಿಎಂ ಈಗ ಹೊಂದಾಣಿಕೆ ರಾಜಕೀಯ ಮಾಡುತ್ತಿದ್ದಾರೆ. ಇದು ಈಗ ಅನಿವಾರ್ಯ. ಎಲ್ಲ ಕಾಲದಲ್ಲೂ ಒಂದೇ ರೀತಿ ಬಿಗಿಯಾಗಿ ರಾಜಕಾರಣ ಮಾಡಲು ಆಗಲ್ಲ. ಹೊಂದಾಣಿಕೆ ಅನಿವಾರ್ಯ ಎಂದು ಹೇಳಿದರು.