ಕನಕಪುರ : ತಾಲೂಕಿನ ದೊಡ್ಡಆಲಹಳ್ಳಿ ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ 2026ನೇ ಸಾಲಿನ ವಾರ್ಷಿಕ ಕ್ರೀಡಾ ದಿನ ಯಶಸ್ವಿಯಾಗಿ ನೆರವೇರಿತು.
ಶುಕ್ರುವಾರ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿ ಬೆಳಗಿಸಿ ಕ್ರೀಡಾ ಮನೋಭಾವ ಪ್ರಮಾಣ ವಚನ ಸ್ವೀಕರಿಸಿದರು. ಮಕ್ಕಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ಕ್ರೀಡಾ ಕೌಶಲ ಮೆರೆದರು. ಶಿವಗಿರಿ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಆಶೀರ್ವಚನ ನೀಡಿ,
ವಾರ್ಷಿಕ ಕ್ರೀಡಾಕೂಟ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ, ಆತ್ಮವಿಶ್ವಾಸ ಮತ್ತು ತಂಡದ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಿ, ಸಕ್ರಿಯವಾಗಿ ಭಾಗವಹಿಸಬೇಕು ಎಂದು ಹೇಳಿದರು.
ಸ್ಪರ್ಧೆಗಳಲ್ಲಿ ವಿಜೇತರಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ವಿತರಿಸಲಾಯಿತು. ಬಿಜಿಎಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಆರ್. ಪ್ರಶಾಂತ್, ಮುಖ್ಯ ಶಿಕ್ಷಕ ಎಸ್.ಎಂ ಉಮೇಶ್, ದೈಹಿಕ ಶಿಕ್ಷಣ ಶಿಕ್ಷಕ ಮಹೇಶ್ ಇತರರು ಇದ್ದರು. equally