ಪ್ರತ್ಯೇಕ ಅಪಘಾತ: ಇಬ್ಬರು ಸಾವು

ಪ್ರತ್ಯೇಕ ಅಪಘಾತ: ಇಬ್ಬರ ಸಾವು
ಪ್ರತ್ಯೇಕ ಅಪಘಾತ: ಇಬ್ಬರ ಸಾವು
Published on

ಪ್ರಮುಖ ಮುಖ್ಯಾಂಶಗಳು

  • ಪ್ರತ್ಯೇಕ ಅಪಘಾತ : ಇಬ್ಬರ ಸಾವು
  • ಬೈಕ್ ಮೇಲಿಂದ ಬಿದ್ದು ಮೃತ
  • ಮುರಗೋಡ,ರಾಯಭಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಪ್ರತ್ಯೇಕ ಅಪಘಾತ : ಇಬ್ಬರ ಸಾವು
ಬೆಳಗಾವಿ: ಜಿಲ್ಲೆಯಲ್ಲಿ ಈಚೆಗೆ ನಡೆದ ಎರಡು ಪ್ರತ್ಯೇಕ ಬೈಕ್ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ.
ಬೈಕ್‌ನಿಂದ ಬಿದ್ದು ಸವಾರ ಸಾವು:
ರಾಯಬಾಗದಿಂದ ಜಲಾಲಪುರ ಕಡೆಗೆ ಹೋಗುತ್ತಿದ್ದ ಬೈಕ್ ಸವಾರ ರಾಯಬಾಗ ಸ್ಟೇಷನ್(ನಾಗರಾಳ) ನಿವಾಸಿ ದರ್ಶನ ಮುಧೋಳ(112)ಈತ ಆಯತಪ್ಪಿ ಬಿದ್ದು, ಗಂಭೀರ ಗಾಯಗೊಂಡು ಮೃತಪಟ್ಟಿದ್ದು, ಪ್ರಕರಣ ದಾಖಲಿಸಿಕೊಂಡ ರಾಯಬಾಗ ಪೊಲೀಸರು ಮಾಹಿತಿ ನೀಡಿದ್ದಾರೆ.
ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ನಿಧನ:
ಬೈಲಹೊಂಗಲ ತಾಲೂಕಿನ ಇಂಚಲ-ಗೋಂತವಾರ ಕ್ರಾಸ್ ಬಳಿ ಬೈಕ್ ಸವಾರನ ನಿಷ್ಕಾಳಜಿಯಿಂದ ಬೈಕ್ ಹಿಂಬದಿ ಕುಳಿತಿದ್ದ ಸವದತ್ತಿ ತಾಲೂಕಿನ ಇಂಚಲ ಗ್ರಾಮದ ನಿವಾಸಿ ಬಸವರಾಜ ಸಿದ್ನಾಳ(೩೨) ಬೈಕ್ ಮೇಲಿಂದ ಕೆಳಗೆ ಬಿದ್ದು,ಮೃತಪಟ್ಟಿದ್ದಾನೆ..ಬೈಕ್ ಸವಾರ ಶಿವಬಸಪ್ಪ ಚಲೋಜಿ ನಿಷ್ಕಾಳಜಿಯಿಂದ ಅಪಘಾತ ಸಂಭವಿಸಿದೆ ಎಂದು ಮೃತನ ಕುಟುಂಬಸ್ಥರು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net