ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿಗಳ ಸಾಧನೆ

ಹಾಸನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಅಂದೂರು ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿಗಳು. ಚಂದ್ರಪ್ರಭಾ, ಭಾಗ್ಯಾ, ಚೇತನ್ ಇತರರಿದ್ದರು.
ಹಾಸನದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದ ಅಂದೂರು ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿಗಳು. ಚಂದ್ರಪ್ರಭಾ, ಭಾಗ್ಯಾ, ಚೇತನ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಿಕ್ಕೋಡು ಹೋಬಳಿಯ ಅಂದೂರು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ
  • ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ
ಬೇಲೂರು: ತಾಲೂಕಿನ ಬಿಕ್ಕೋಡು ಹೋಬಳಿಯ ಅಂದೂರು ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ವಿದ್ಯಾರ್ಥಿಗಳು ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.
ವಸತಿ ಶಾಲೆ ಪ್ರಾಂಶುಪಾಲೆ ಚಂದ್ರಪ್ರಭಾ ಮಾತನಾಡಿ, ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಿಸದ್ದ 17 ವರ್ಷ ವಯೋಮಿತಿಯ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ವಸತಿ ಶಾಲೆ ವಿದ್ಯಾರ್ಥಿನಿಯರು, ಎದುರಾಳಿ ತಂಡಗಳ ವಿರುದ್ಧ ರೋಚಕ ಆಟವಾಡಿ ಗೆಲುವು ಸಾಧಿಸುವ ಮೂಲಕ ವಿಭಾಗ ಮಟ್ಟದ ಪಂದ್ಯಾವಳಿಗೆ ಅರ್ಹತೆ ಪಡೆದಿದ್ದಾರೆ ಎಂದರು.
ವಿದ್ಯಾರ್ಥಿನಿಯರ ಈ ಸಾಧನೆ ಮೆಚ್ಚುವಂತದ್ದು. ಕ್ರೀಡೆ ಕೇವಲ ದೈಹಿಕ ಆರೋಗ್ಯ ವೃದ್ಧಿಸುವುದು ಮಾತ್ರವಲ್ಲ. ಬದಲಾಗಿ ಮಕ್ಕಳಲ್ಲಿ ಶಿಸ್ತು, ಏಕಾಗ್ರತೆ ಹಾಗೂ ತಂಡದಲ್ಲಿ ಸಮಾನ ಭಾವನೆ ಬೆಳೆಸುತ್ತದೆ. ಶೈಕ್ಷಣಿಕ ಪ್ರಗತಿ ಜತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ನಮ್ಮ ಶಾಲೆ ವಿದ್ಯಾರ್ಥಿನಿಯರು ಈ ಮಟ್ಟದ ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು. ವಸತಿ ಶಾಲೆ ಶಿಕ್ಷಕಿ ಭಾಗ್ಯಾ, ಶಿಕ್ಷಕ ಚೇತನ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net