ಬಿಜಿಎಸ್ ಪಿಯು ಕಾಲೇಜು ವಿದ್ಯಾರ್ಥಿಗಳ ಸಾಧನೆ

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಶ್ರೀ ಶಂಭುನಾಥ ಸ್ವಾಮೀಜಿ ಅಭಿನಂದಿಸಿದರು.
ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನು ಶ್ರೀ ಶಂಭುನಾಥ ಸ್ವಾಮೀಜಿ ಅಭಿನಂದಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಹಾಸನದ ಸಂತ ಜೋಸೆಫ್ ಪದವಿಪೂರ್ವ ಕಾಲೇಜು ಸಹಯೋಗ
  • ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರಾಸ್ ಕಂಟ್ರಿ (ಗುಡ್ಡಗಾಡು ಓಟ) ಸ್ಪರ್ಧೆ
ಅರಕಲಗೂಡು: ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಹಾಸನದ ಸಂತ ಜೋಸೆಫ್ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಹಾಸನದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರಾಸ್ ಕಂಟ್ರಿ (ಗುಡ್ಡಗಾಡು ಓಟ) ಸ್ಪರ್ಧೆಯಲ್ಲಿ ಪಟ್ಟಣದ ಬಿಜಿಎಸ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.
ಬಾಲಕಿಯರ ವಿಭಾಗದಲ್ಲಿ ಕಾಲೇಜಿನ ಸುಚಿತ್ರಾ ಪ್ರಥಮ ಸ್ಥಾನ ಹಾಗೂ ಐ.ಸಿ.ಸ್ಫೂರ್ತಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಗಳಿಸಿದ್ದಾರೆ.
ಬಾಲಕರ ವಿಭಾಗದಲ್ಲಿ ಬಿ.ಎಂ.ದೃಶ್ಯಂತ್ ಪ್ರಥಮ ಸ್ಥಾನ, ರಿಯಾನ್ ನಾಲ್ಕನೇ ಸ್ಥಾನ ಹಾಗೂ ಎಸ್.ಎಚ್.ಹೃತಿಕ್ ಗೌಡ ಐದನೇ ಸ್ಥಾನ ಪಡೆದು ರಾಜ್ಯಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸಾಧನೆಯನ್ನು ಸಂಸ್ಥೆ ಕಾರ್ಯದರ್ಶಿ ಶ್ರೀ ಶಂಭುನಾಥ ಸ್ವಾಮೀಜಿ ಹಾಗೂ ಪ್ರಾಂಶುಪಾಲ ಮಹೇಶ್ ಹೊಡೆನೂರು ಅಭಿನಂದಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net