600ಕ್ಕೆ 600 ಅಂಕಗಳಿಸಿದರೆ ವಿಶೇಷ ಉಡುಗೊರೆ : ಪ್ರಗತಿ ಶಿಕ್ಷಣ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಎಸ್.ಕೃಪಾಶಂಕರ್ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ವರ್ಷದ ದ್ವೀತಿಯ ಪಿಯುಸಿಯಲ್ಲಿ 600ಕ್ಕೆ 600 ಅಂಕಗಳಿಸುವ ವಿದ್ಯಾರ್ಥಿಗಳಿಗೆ ಸಂಸ್ಥೆಯಿಂದ ವಿಶೇಷ ಉಡುಗೊರೆ, 595ಕ್ಕಿಂತ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿಶೇಷ ವಿದ್ಯಾರ್ಥಿ ವೇತನ ನೀಡಲಾಗುವುದು. ವಿದ್ಯಾರ್ಥಿಗಳು ಮೊಬೈಲ್ಬಳಕೆಯಿಂದ ದೂರವಿದ್ದು ಶಿಸ್ತು ಮತ್ತು ಏಕಾಗ್ರತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.