ನೀರಿನ ತೊಂದರೆಯಾದರೆ ಕ್ರಮ

ಇಂಡಿ ತಾಪಂ ಸಭಾಭವನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಟಾಸ್‌ಕ್ೋರ್ಸ್ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿದರು. ಚಿದಾನಂದ ಗುರುಸ್ವಾಮಿ, ನಾಗೇಂದ್ರ ಕೋಳಶೆಟ್ಟಿ ಇತರರಿದ್ದರು.
ಇಂಡಿ ತಾಪಂ ಸಭಾಭವನದಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಟಾಸ್‌ಕ್ೋರ್ಸ್ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿದರು. ಚಿದಾನಂದ ಗುರುಸ್ವಾಮಿ, ನಾಗೇಂದ್ರ ಕೋಳಶೆಟ್ಟಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ಸೂಚನೆ
  • ಟಾಸ್ಕ್ ಫೋರ್ಸ್ ಸಭೆ
ಇಂಡಿ: ಗ್ರಾಮೀಣ ಭಾಗದ ಯಾವುದೇ ಗ್ರಾಮದಲ್ಲೂ ಕುಡಿಯುವ ನೀರಿನ ತೊಂದರೆ ಉಂಟಾಗಬಾರದು, ಒಂದು ವೇಳೆ ನೀರಿನ ಸಮಸ್ಯೆ ತಲೆದೋರಿದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ನಗರದ ತಾಲೂಕು ಪಂಚಾಯಿತಿ ಸಭಾಭವನದಲ್ಲಿ ತಾಲೂಕಿನ ಕುಡಿಯುವ ನೀರಿನ ಸಮಸ್ಯೆ ಕುರಿತು ನಡೆದ ಟಾಸ್ಕ್ ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಬಂದರೆ, ಆಯಾ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ನೋಡೆಲ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ನೀರಿನ ಮೂಲಗಳು ಬತ್ತಿ ಹೋಗಿದ್ದರೆ, ತಕ್ಷಣವೇ ಗ್ರಾಮೀಣ ಭಾಗದ ಖಾಸಗಿ ಜಮೀನುಗಳನ್ನು ಅಥವಾ ರೈತರ ನೀರಾವರಿ ಮೂಲಗಳನ್ನು ಗುರುತಿಸಬೇಕು.
ಗುರುತಿಸಲಾದ ಖಾಸಗಿ ನೀರಿನ ಮೂಲಗಳಿಂದ ಬಾಡಿಗೆ ರೂಪದಲ್ಲಿ ನೀರನ್ನು ಪಡೆದು, ತಕ್ಷಣವೇ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಬೇಕು. ಅವಶ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಿ ಎಂದು ತಿಳಿಸಿದರು.
ನಿರ್ಲಕ್ಷೃಕ್ಕೆ ಜಾಗವಿಲ್ಲ: ನೀರಿನ ಲಭ್ಯತೆ ಇಲ್ಲ ಎಂಬ ನೆಪ ಹೇಳಿ ಅಧಿಕಾರಿಗಳು ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸಬೇಕು. ಪ್ರತಿ ಸೋಮವಾರ ಅಧಿಕಾರಿಗಳು ಟಾಸ್‌ಕ್ೋರ್ಸ್ ಸಭೆ ನಡೆಸಿ ಗ್ರಾಮ ಆಡಳಿತ ಅಧಿಕಾರಿಗಳು ಸಹ ಗ್ರಾ.ಪಂ ಅಧಿಕಾರಿಗಳೊಂದಿಗೆ ಕೈ ಜೋಡಿಸಿ ವಾಸ್ತವ ಸಮಸ್ಯೆ ಕಂಡುಕೊಂಡು ಪ್ರತಿ ಸವಾರ ಸಭೆಗೆ ತಿಳಿಸಬೇಕೆಂದು ಶಾಸಕರು ಸೂಚಿಸಿದರು.
ತೆನ್ನೆಳ್ಳಿ ಗ್ರಾಮದಲ್ಲಿ ನೀರಿನ ಸಮಸ್ಯೆ ಇತ್ತು. ಈಗ ಏನಾಗಿದೆ? ಎಂದು ಶಾಸಕರು ಪ್ರಶ್ನಿಸುತ್ತಿದ್ದಂತೆ ಉತ್ತರಿಸಿದ ತಾ.ಪಂ ಇಒ ಮಹಾದೇವಪ್ಪ ಏವೂರ ಈಗಾಗಲೇ ಗ್ರಾಮದಲ್ಲಿ ಒಂದು ಬೋರ್‌ವೆಲ್ ಕೊರೆಸಿ ನೀರಿನ ಸಮಸ್ಯೆ ಬಗೆಹರಿಸಲಾಗಿದೆ ಎಂದು ತಿಳಿಸಿದರು.
ತಾಲೂಕಿನ ಯಾವುದೇ ವಸತಿ ನಿಲಯ, ಸರ್ಕಾರಿ ಶಾಲಾ ಕಾಲೇಜ್‌ಗಳಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ್ ನಾಗೇಂದ್ರ ಕೋಳಶೆಟ್ಟಿ, ತಾ.ಪಂ ಇಒ ಮಹಾದೇವಪ್ಪ ಏವೂರ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿ ಎಸ್.ಆರ್. ಬಂಡಿ, ಗೋವಿಂದ ರಾಠೋಡ, ಶಿವಾಜಿ ಬನಸೋಡೆ, ಎಸ್.ಆರ್. ನಡಗಡ್ಡಿ, ಎಸ್.ಆರ್ ಮೇಡೇದಾರ, ರಾಜೇಶ ಹೂಗಾರ, ಉಮೇಶ ಲಮಾಣಿ, ಎಸ್.ಆರ್. ಗದ್ಯಾಳ ಮತ್ತಿತರರಿದ್ದರು.
"

ಸಭೆಯಲ್ಲಿ ಮಾರ್ಧ್ವನಿಸಿದ ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ವರದಿ

ಜೂ.18ರಂದು ವಿಜಯವಾಣಿ ಪತ್ರಿಕೆಯಲ್ಲಿ ಬಹಿರ್ದೆಸೆಗೆ ಬಯಲೇ ಗತಿ ಶಿರೋನಾಮೆಯಡಿ ಪ್ರಕಟಗೊಂಡಿದ್ದ ವರದಿಯ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಹೊರ್ತಿ ಗ್ರಾಮದ ಮುರಾರ್ಜಿ ದೇಸಾಯಿ ಬಾಲಕರ ವಸತಿ ನಿಲಯದಲ್ಲಿ ನೀರಿನ ಸಮಸ್ಯೆ ಇದೆ. ಅದನ್ನು ಕೂಡಲೆ ಪರಿಹರಿಸಿ, ತೊಂದರೆ ನೀಗಿಸಲು ಏನು ಅವಶ್ಯಕತೆ ಇದೆ ಎಂಬುದನ್ನು ತಿಳಿದುಕೊಂಡು ಒಂದು ಅಂದಾಜು ಪತ್ರಿಕೆ ಸಿದ್ಧಪಡಿಸಿ ಅಲ್ಲಿ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಯೋಜನೆ ರೂಪಿಸಿ ಎಂದು ತಾ.ಪಂ ಇಒ ಹಾಗೂ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net