ಬೆಳಗಾವಿ ಪಾಲಿಕೆ ವ್ಯಾಪ್ತಿಯ ವಾರ್ಡ್ಗಳ ಸಮಗ್ರ ಅಭಿವೃದ್ಧಿ, ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ವಿಶೇಷ ಯೋಜನೆ ರೂಪಿಸುವ ಜತೆಗೆ ಹೆಚ್ಚುವರಿ ಅನುದಾನ ನೀಡುವ ಕುರಿತು ಕ್ರಮ ವಹಿಸಲಾಗುವುದು. ನಗರದ ಅಭಿವೃದ್ಧಿಯಲ್ಲಿ ರಾಜಕಾರಣ ಮಾಡಲು ಹೋಗುವುದಿಲ್ಲ. ಬೆಳಗಾವಿಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ಮಾಡುವ ಕುರಿತು ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು. ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಸಚಿವರು, ಶಾಸಕರು ಹಾಗೂ ಅಧಿಕಾರಿ, ಸಿಬ್ಬಂದಿ ಕರ್ತವ್ಯ ಎಂದು ಹೇಳಿದರು.