ಆದರ್ಶ ವಿದ್ಯಾಲಯ ಪ್ರವೇಶ ಪರೀಕ್ಷೆ ಕೀ ಉತ್ತರ ಪ್ರಕಟ: ಆಕ್ಷೇಪಣೆಗೆ ಅವಕಾಶ

ಆದರ್ಶ ವಿದ್ಯಾಲಯ
ಆದರ್ಶ ವಿದ್ಯಾಲಯ
Published on

ಪ್ರಮುಖ ಮುಖ್ಯಾಂಶಗಳು

  • ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಮಾ.22ರಂದು ನಡೆಸಿದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದೆ.
  • ಕೀ ಉತ್ತರಗಳನ್ನು ಬುಧವಾರ ಮಂಡಳಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಮಾ.27ರ ಸಂಜೆ 5.30ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.
  • ಪ್ರತಿ ಪ್ರಶ್ನೆಗಳಿಗೆ ಪ್ರತ್ಯೇಕವಾಗಿ ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಇ-ಮೇಲ್ ಅಥವಾ ಅಂಚೆ ಮೂಲಕ ಕಳುಹಿಸುವಂತೆ ಪ್ರಕಟಣೆ
ಬೆಂಗಳೂರು: ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಮಾ.22ರಂದು ನಡೆಸಿದ ಪ್ರವೇಶ ಪರೀಕ್ಷೆಯ ಕೀ ಉತ್ತರಗಳನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಿಸಿದೆ. ವಿದ್ಯಾರ್ಥಿಗಳು ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದೆ.
ಕೀ ಉತ್ತರಗಳನ್ನು ಬುಧವಾರ ಮಂಡಳಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಮಾ.27ರ ಸಂಜೆ 5.30ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ. ಪ್ರತಿ ಪ್ರಶ್ನೆಗಳಿಗೆ ಪ್ರತ್ಯೇಕವಾಗಿ ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಇ-ಮೇಲ್ ksqaacbangalore@gmail.com
ಅಥವಾ ಅಂಚೆ ಮೂಲಕ ಕಾರ್ಯನಿರ್ವಾಹಕ ನಿರ್ದೇಶಕರು, ಕೆಎಸ್‌ಕ್ಯುಎಎಸಿ, ಕೆಎಸ್‌ಇಎಬಿ, 1ನೇ ಮಹಡಿ, 6ನೇ ಮುಖ್ಯರಸ್ತೆ, ಮಲ್ಲೇಶ್ವರ, ಬೆಂಗಳೂರು-560 003 ಈ ವಿಳಾಸಕ್ಕೆ ಕಳುಹಿಸುವಂತೆ ಮಂಡಳಿ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net