ಹೆಚ್ಚುವರಿ ರು.32 ಕೋಟಿ ಅನುದಾನ ಬಿಡುಗಡೆ

ಶಾಸಕ ಡಾ.ಅಜಯಸಿಂಗ್
ಶಾಸಕ ಡಾ.ಅಜಯಸಿಂಗ್
Published on

ಪ್ರಮುಖ ಮುಖ್ಯಾಂಶಗಳು

  • ಜೇವರ್ಗಿ ಶಾಸಕ ಡಾ.ಅಜಯಸಿಂಗ್​ ಮಾಹಿತಿ
  • ನರಿಬೋಳ-ಚಾಮನೂರು ಸೇತುವೆ ಕಾಮಗಾರಿ
ಕಲಬುರಗಿ: ಜೇವರ್ಗಿ ಮತ್ತು ಚಿತ್ತಾಪುರ ತಾಲೂಕು ಮಧ್ಯೆ ಸಂಪರ್ಕ ಕಲ್ಪಿಸುವ ಭೀಮಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ಸೇತುವೆ ಬಾಕಿ ಕಾಮಗಾರಿ ಪೂರ್ಣಗೊಳಿಸಲು 32 ಕೋಟಿ ರೂ. ಹೆಚ್ಚುವರಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಕೆಆರ್​ಡಿಬಿ ಅಧ್ಯರೂ ಆದ ಜೇವರ್ಗಿ ಶಾಸಕ ಡಾ.ಅಜಯಸಿಂಗ್​ ತಿಳಿಸಿದ್ದಾರೆ.
ನರಿಬೋಳ& ಚಾಮನೂರು ಸೇತುವೆ ಕಾಮಗಾರಿ ಆರಂಭವಾಗಿ ಕಾರಣಾಂತರಗಳಿಂದ ನಿಂತಿತ್ತು. ಈ ವಿಚಾರವಾಗಿ ಸದನದಲ್ಲಿ ಅನೇಕ ಬಾರಿ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆದಿದ್ದರ ಲವಾಗಿ ಬಾಕಿ ಕೆಲಸ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ಬಿಡುಗಡೆಗೆ ಲೋಕೋಪಯೋಗಿ ಇಲಾಖೆ ಮಂಜೂರಾತಿ ನೀಡಿದ್ದು, 6ರಿಂದ ಒಂಬತ್ತು ತಿಂಗಳಲ್ಲಿ ಕೆಲಸ ಮುಗಿಸಲಾಗುವುದು. ಟೆಂಡರ್​ ಪ್ರಕ್ರಿಯೆ ಶ್ರೀ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಈ ಹಿಂದೆ ಭೂಸ್ವಾಧಿನ ಪ್ರಕ್ರಿಯೆಯಲ್ಲಿ ಉಂಟಾಗಿದ್ದ ತಾಂತ್ರಿಕ ಹಾಗೂ ಕಾನೂನಾತ್ಮಕ ವಿಳಂಬದಿಂದಾಗಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು ಸಂಚಾರಕ್ಕೆ ತೀವ್ರ ತೊಂದರೆಯಾಗಿತ್ತು. ಇದನ್ನು ಮನಗಂಡು ತಾಂತ್ರಿಕ ಅಡೆತಡೆ ನಿವಾರಿಸಲಾಗಿದೆ. ಸದ್ಯ ಭೂಸ್ವಾಧಿನ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಅಗತ್ಯವಿರುವ ಹೆಚ್ಚುವರಿ ಮೊತ್ತಕ್ಕೆ ಸರ್ಕಾರ ಅನುಮೋದನೆ ನೀಡಿದ್ದು ಕಾಮಗಾರಿ ಚುರುಕಿಗೆ ಪೂರಕವಾಗಿದೆ. ಜೇವರ್ಗಿ ಸಂಪರ್ಕ ಸೇತುವೆಯ ಆರ್ಥಿಕ ಹಾಗೂ ಸಾಮಾಜಿಕ ಮಹತ್ವ ಅರಿತು ಬೆಂಗಳೂರಿನಲ್ಲಿ ಲೋಕೋಪಯೋಗಿ ಸಚಿವ ಸತೀಶ್​ ಜಾರಕಿಹೊಳಿ ಅವರನ್ನು ಇತ್ತೀಚೆಗೆ ಭೇಟಿಯಾಗಿ ಮನವರಿಕೆ ಮಾಡಿಕೊಡಲಾಗಿತ್ತು. ಸ್ಪಂದಿಸಿದ ಸಚಿವರು ಹೆಚ್ಚುವರಿ ಅನುದಾನ ಬಿಡುಗಡೆಗೆ ಅನುಮೋದನೆ ನೀಡಿದ್ದಲ್ಲದೆ ಶ್ರೀದಲ್ಲೆ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
"

ಈ ಹೈಟೆಕ್​ ಸೇತುವೆ ನಿರ್ಮಾಣದಿಂದ ಜೇವರ್ಗಿ ಮತ್ತು ಚಿತ್ತಾಪುರ ತಾಲೂಕಿನ ನೂರಾರು ಹಳ್ಳಿಗಳ ನಡುವಿನ ಸಂಚಾರ ವ್ಯವಸ್ಥೆ ಸುಗಮಗೊಳ್ಳಲಿದೆ. ಕೃಷಿ ಉತ್ಪನ್ನಗಳ ಸಾಗಣೆ, ವಾಣಿಜ್ಯ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಈ ಸೇತುವೆ ವೇಗ ನೀಡಲಿದೆ. ಶೀಘ್ರದಲ್ಲೆ ಗುಣಮಟ್ಟದ ಕಾಮಗಾರಿ ಮುಗಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು.

— > ಡಾ.ಅಜಯಸಿಂಗ್​ ಜೇವರ್ಗಿ ಶಾಸಕ


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net