ಅಂಗವೈಕಲ್ಯ ತಡೆಗೆ ಪೋಲಿಯೋ ಹಾಕಿಸಿ / HOSAKOTE

ಹೊಸಕೋಟೆ ನಗರದ ತಾಲೂಕು ಆಸ್ಪತ್ರೆಯಲ್ಲಿ ರೋಟರಿಯಿಂದ ಆಯೋಜಿಸಿದ್ದ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಶರತ್​ ಬಚ್ಚೇಗೌಡ ಚಾಲನೆ ನೀಡಿದರು. ಉಪತಹಸೀಲ್ದಾರ್​ ಭಾಸ್ಕರ್​, ತಾಲೂಕು ಆರೋಗ್ಯಾಧಿಕಾರಿ ಡಾ.ವೀಣಾ, ಟೌನ್​ ಕಾಂಗ್ರೆಸ್​ ಅಧ್ಯಕ್ಷ ಬಿ.ವಿ.ಭೈರೇಗೌಡ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೇಶವಮೂರ್ತಿ ಇತರರು ಇದ್ದರು.
ಹೊಸಕೋಟೆ ನಗರದ ತಾಲೂಕು ಆಸ್ಪತ್ರೆಯಲ್ಲಿ ರೋಟರಿಯಿಂದ ಆಯೋಜಿಸಿದ್ದ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಶಾಸಕ ಶರತ್​ ಬಚ್ಚೇಗೌಡ ಚಾಲನೆ ನೀಡಿದರು. ಉಪತಹಸೀಲ್ದಾರ್​ ಭಾಸ್ಕರ್​, ತಾಲೂಕು ಆರೋಗ್ಯಾಧಿಕಾರಿ ಡಾ.ವೀಣಾ, ಟೌನ್​ ಕಾಂಗ್ರೆಸ್​ ಅಧ್ಯಕ್ಷ ಬಿ.ವಿ.ಭೈರೇಗೌಡ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೇಶವಮೂರ್ತಿ ಇತರರು ಇದ್ದರು.
Published on
ಹೊಸಕೋಟೆ : ಪೋಲಿಯೋಮುಕ್ತ ರಾಷ್ಟ್ರ ನಿರ್ಮಾಣ ಹಾಗೂ ಮಕ್ಕಳಲ್ಲಿ ಶಾಶ್ವತ ಅಂಗವೈಕಲ್ಯ ತಡೆಗಟ್ಟಲು ಪ್ರಾರಂಭಿಸಿದ ಪಲ್ಸ್​ ಪೊಲೀಯೋ ಲಸಿಕಾ ಅಭಿಯಾನ ಪ್ರಗತಿ ಕಂಡಿದೆ ಎಂದು ಶಾಸಕ ಶರತ್​ ಬಚ್ಚೇಗೌಡ ತಿಳಿಸಿದರು.
ನಗರದ ಸಾರ್ವಜನಿಕ ತಾಲೂಕು ಆಸ್ಪತ್ರೆಯಲ್ಲಿ ರೋಟರಿಯಿಂದ ಆಯೋಜಿಸಿದ್ದ ಪಲ್ಸ್​ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೊಸಕೋಟೆ ತಾಲೂಕು ಪಲ್ಸ್​ ಪೋಲಿಯೋ ಲಸಿಕಾ ಅಭಿಯಾನದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುವುದು ಹೆಮ್ಮೆಯ ಸಂಗತಿ. ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಪೋಲಿಯೋ ನಿಮೂರ್ಲನೆಯಾಗಿದ್ದರೂ ನೆರೆಯ ಪಾಕ್​, ಅಪ್ಘಾನಿಸ್ತಾನ ಅಂತಹ ದೇಶಗಳಲ್ಲಿ ಪೋಲಿಯೋ ಪ್ರಕರಣಗಳು ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಭಾರತದಲ್ಲಿ ಪಲ್ಸ್​ ಪೋಲಿಯೋ ಲಸಿಕೆ ನೀಡಲಾಗುತ್ತಿದೆ. ಮಕ್ಕಳ ಆರೋಗ್ಯ ರಕ್ಷಣೆ ಮತ್ತು ಪೋಲಿಯೋಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಐದು ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.
ರೋಟರಿ ಜಿಲ್ಲಾ ಸಹಾಯಕ ಪಾಲಕ ಡಿಎಸ್​.ರಾಜ್​ಕುಮಾರ್​ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಕಾರದೊಂದಿಗೆ ಉಚಿತ ಲಸಿಕೆ ವಿತರಣೆ ಮಾಡುತ್ತಿದೆ ಎಂದರು.
ರೋಟರಿ ಅಧ್ಯಕ್ಷ ಕೆ.ವಿ.ಸುಬ್ರಹ್ಮಣಿ ಮಾತನಾಡಿ, ಶಾಸಕ ಶರತ್​ ಬಚ್ಚೇಗೌಡ ಅವರು ತಾಲೂಕಿನಲ್ಲಿ ಆರೋಗ್ಯ, ಶಿಕ್ಷಣ ೇತ್ರದ ಸಮಗ್ರ ಅಭಿವೃದ್ಧಿಗೆ ಅವಿರತ ಶ್ರಮಿಸುತ್ತಿದ್ದಾರೆ. ಕೊಳತೂರು ಬಳಿ ತಾಯಿ ಮಕ್ಕಳ ಆಸ್ಪತ್ರೆ, ನೂರು ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆ ಸಹ ನಿರ್ಮಾಣ ಮಾಡುತ್ತಿದ್ದು, ಕೆಲವೇ ತಿಂಗಳುಗಳಲ್ಲಿ ಉದ್ಘಾಟನೆ ಆಗಲಿದೆ ಎಂದು ಹೇಳಿದರು.
ನಿರ್ದೇಶಕ ಡಾ.ಎಚ್​.ಎಂ.ಸುಬ್ಬರಾಜು, ಮಾಜಿ ಅಧ್ಯಕ್ಷ ಡಾ.ಸಿ.ಜಯರಾಜ್​, ತಾಲೂಕು ಆಸ್ಪತ್ರೆ ಆಡಳಿತಾಧಿಕಾರಿ ಅನ್ಬುಕುಮಾರ್​, ರೋಟರಿ ಅಧ್ಯಕ್ಷ ಸುಬ್ರಹ್ಮಣಿ, ವಕೀಲರ ಸಂದ ಸದಸ್ಯ ನಾಗರಾಜ್​, ಆರೋಗ್ಯ ಇಲಾಖೆ ಅಧಿಕಾರಿಗಳು, ರೋಟರಿ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

ತಾಲೂಕಿನಲ್ಲಿ ತಾಯಿ ಮಕ್ಕಳ ಆಸ್ಪತ್ರೆ ಜತೆಗೆ ಸಾರ್ವಜನಿಕ ಆಸ್ಪತ್ರೆಯೂ ನಿರ್ಮಾಣವಾಗುತ್ತಿದೆ. ಜತೆಗೆ ನಂದಗುಡಿಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗಿದೆ. ಸೂಲಿಬೆಲೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಖಾಸಗಿ ಸಹಬಾಗಿತ್ವದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ ಹಾಗೂ ಅನುಗೊಂಡನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು 1.5 ಕೋಟಿ ರೂ. ವೆಚ್ಚದಲ್ಲಿ ಅತ್ಯುತ್ತಮವಾಗಿ ಅಭಿವೃದ್ಧಿಗೊಳಿಸಿದೆ. ಸರ್ಕಾರ ವೈದ್ಯರ ನೇಮಕಾತಿಗೆ ಮುಂದಾಗಿದ್ದು, ಯಾರೇ ವೈದ್ಯರು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡಲಿಚ್ಚಿಸಿದಲ್ಲಿ ನೇರ ನೇಮಕಾತಿಗೆ ಮುಂದಾಗಿದ್ದು, ಶ್ರೀ ವೈದ್ಯರ ಕೊರತೆ ನೀಗಲಿದೆ.

— > ಶರತ್​ ಬಚ್ಚೇಗೌಡ, ಶಾಸಕ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net