ಭಾರತದ ಸಂವಿಧಾನಕ್ಕೆ ವಿರುದ್ಧ

Against the Constitution of India
Against the Constitution of India
Published on
constitution ಶಿರಾ: ಕರ್ನಾಟಕ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ&2025 ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿ ವಿಧಾನ ಪರಿಷತ್​ ಸದಸ್ಯ ಚಿದಾನಂದ್​ ಎಂ.ಗೌಡ ಅಧ್ಯಕ್ಷತೆಯಲ್ಲಿ ಶಿರಾ ತಾಲೂಕು ಬಿಜೆಪಿ ವತಿಯಿಂದ ಪ್ರತಿಭಟಿಸಿ, ತಹಸೀಲ್ದಾರ್​ ಅವರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕರು, ಈ ವಿಧೇಯಕವು ಸಂವಿಧಾನದ 19 (1) ಮತ್ತು (2) ಪರಿಚ್ಛೇದದಡಿ ನಾಗರಿಕರಿಗೆ ನೀಡಿರುವ ವಾಕ್​ ಅಥವಾ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವ ಯತ್ನವಾಗಿದೆ. ಡಾ.ಬಿ.ಆರ್​.ಅಂಬೇಡ್ಕರ್​ ಅವರು ನೀಡಿದ ಮೂಲ ಹಕ್ಕುಗಳನ್ನು ಕಾಂಗ್ರೆಸ್​ ಸರ್ಕಾರ ದಮನ ಮಾಡುತ್ತಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕಾಯ್ದೆಯಲ್ಲಿ ದ್ವೇಷ ಭಾಷಣದ ವ್ಯಾಖ್ಯಾನವೇ ಅಸ್ಪಷ್ಟವಾಗಿದ್ದು, ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿ ಇದನ್ನು ಬಳಸುವ ಅಪಾಯವಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಅಥವಾ ಸತ್ಯವನ್ನು ಹೇಳುವುದನ್ನೂ ದ್ವೇಷ ಎಂದು ಪರಿಗಣಿಸುವ ಸಾಧ್ಯತೆ ಇದೆ. ಈ ಕಾನೂನು ಪೊಲೀಸರಿಗೆ ಮತ್ತು ಸರ್ಕಾರಕ್ಕೆ ನಿರಂಕುಶ ಅಧಿಕಾರ ನೀಡಲಿದ್ದು, ಈ ಅಪರಾಧಗಳಿಗೆ ಜಾಮೀನು ಇರುವುದಿಲ್ಲ. ಪತ್ರಕರ್ತರ ತನಿಖಾ ವರದಿಗಳು, ಸಾಮಾಜಿಕ ಮಾಧ್ಯಮದ ಹಾಸ್ಯ ಅಥವಾ ಟೀಕೆಗಳನ್ನು ಹತ್ತಿಕ್ಕಲು ಮತ್ತು ಪ್ರತಿಭಟನೆಗಳನ್ನು ತಡೆಯಲು ಈ ವಿಧೇಯಕವನ್ನು ಬಳಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಬಿಜೆಪಿ ಆರೋಪಿಸಿದೆ.
ಚಿದಾನಂದ್​ ಎಂ.ಗೌಡ ಮಾತನಾಡಿ, ಪ್ರಜಾಪ್ರಭುತ್ವದ ಮೂಲತತ್ವಕ್ಕೆ ಹಾನಿ ಮಾಡುವ ಈ ದಮನಕಾರಿ ಕಾನೂನನ್ನು ಸರ್ಕಾರ ಕೂಡಲೇ ಹಿಂಪಡೆಯಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಬಿಜೆಪಿ ನಿಕಟ ಪೂರ್ವ ಅಧ್ಯಕ್ಷ ಹಾಗೂ ತೆಂಗು ನಾರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಕೆ.ಮಂಜುನಾಥ್​ ಸೇರಿದಂತೆ ಬಿಜೆಪಿಯ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net