ಜನರ ಸೇವೆಗೆ ಎಐ ಆಧಾರಿತ ಧ್ವನಿ ತಂತ್ರಜ್ಞಾನ

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ
ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ
Published on
ಬೆಂಗಳೂರು: ನಾಗರಿಕರ ಸೇವೆಗಾಗಿ ಕೃತಕ ಬುದ್ಧಿಮತ್ತೆ(ಎಐ) ಆಧಾರಿತ ಧ್ವನಿ ತಂತ್ರಜ್ಞಾನವನ್ನು ಅಳವಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಬುಧವಾರ ವಿಕಾಸಸೌಧದಲ್ಲಿ ಅತ್ಯಾಧುನಿಕ ಧ್ವನಿ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುತ್ತಿರುವ ಜಾಗತಿಕ ಕೃತಕ ಬುದ್ಧಿಮತ್ತೆ ಸಂಸ್ಥೆ ಇಲೆವನ್ ಲ್ಯಾಬ್ಸ್ ತಂಡದೊಂದಿಗೆ ಪ್ರಿಯಾಂಕ್ ಖರ್ಗೆ ಸಭೆ ನಡೆಸಿದರು. ಕೃತಕ ಬುದ್ಧಿಮತ್ತೆ ಆಧಾರಿತ ಸ್ವಯಂಚಾಲಿತ ಧ್ವನಿ ರೂಪಾಂತರ ತಂತ್ರಜ್ಞಾನ, ಬಹುಭಾಷಾ ಧ್ವನಿ ಸೇವೆಗಳು ಹಾಗೂ ಸಂವಾದಾತ್ಮಕ ಕೃತಕ ಬುದ್ಧಿಮತ್ತೆ ವ್ಯವಸ್ಥೆಗಳ ಮೂಲಕ ನಾಗರಿಕ ಸೇವೆಗಳ ವಿತರಣೆಯನ್ನು ಇನ್ನಷ್ಟು ಸುಲಭ, ವೇಗದ ಹಾಗೂ ಪರಿಣಾಮಕಾರಿಯಾಗಿಸುವ ಕುರಿತು ವಿಸ್ತೃತವಾಗಿ ಸಚಿವರು ಚರ್ಚಿಸಿದರು.

ಈ ನಿಟ್ಟಿನಲ್ಲಿ ನವೋದ್ಯಮಗಳನ್ನು ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳುವ ಅವಕಾಶಗಳನ್ನು ಪರಿಶೀಲಿಸುತ್ತಿದ್ದೇವೆ ಎಂದರು.

ಇಲೆವನ್ ಲ್ಯಾಬ್ಸ್‌ನಂತಹ ಜಾಗತಿಕ ತಂತ್ರಜ್ಞಾನ ಸಂಸ್ಥೆಗಳೊಂದಿಗೆ ನಿರಂತರ ಸಹಯೋಗದ ಮೂಲಕ ಸಾರ್ವಜನಿಕ ಸೇವೆಗಳ ಗುಣಮಟ್ಟವನ್ನು ಇನ್ನಷ್ಟು ಉತ್ತಮಗೊಳಿಸಿ, ತಂತ್ರಜ್ಞಾನವನ್ನು ಜನೋಪಯೋಗಿ ಸಾಧನವನ್ನಾಗಿ ರೂಪಿಸುವ ನಮ್ಮ ಪ್ರಯತ್ನ ಮುಂದುವರಿಯಲಿದೆ. ಜನರಿಗೆ ಅರ್ಥಪೂರ್ಣ, ಸುಲಭ ಮತ್ತು ಪರಿಣಾಮಕಾರಿ ಸೇವೆಗಳನ್ನು ತಲುಪಿಸಲು ಮಹತ್ವದ ಪಾತ್ರ ವಹಿಸಲಿವೆ ಎಂದು ಖರ್ಗೆ ಭರವಸೆ ನೀಡಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net