ಬದುಕಿನಲ್ಲಿ ಸೃಜನಶೀಲ ಚಿಂತನೆಗೆ ಎಐ ಸಹಾಯ

ವಿದ್ಯಾರ್ಥಿನಿಯರಿಗೆ ಎಐ ಅಬ್ಯಾಸದ ಪುಸ್ತಕ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್.
ವಿದ್ಯಾರ್ಥಿನಿಯರಿಗೆ ಎಐ ಅಬ್ಯಾಸದ ಪುಸ್ತಕ ನೀಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್.
Published on

ಪ್ರಮುಖ ಮುಖ್ಯಾಂಶಗಳು

  • ವಿಜಯ ಪಥ ಪ್ರಾಜೆಕ್ಟ್ ಉದ್ಘಾಟಿಸಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ ವಿತ್ತ ಸಚಿವೆ
ಹೊಸಪೇಟೆ: ಈಗಿನ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಸೂಕ್ತ ತಂತ್ರಜ್ಞಾನ ಬಳಸಿಕೊಳ್ಳದಿದ್ದರೆ ಭವಿಷ್ಯದಲ್ಲಿ ದೊಡ್ಡ ಮಟ್ಟದ ಪರಿಣಾಮ ಎದುರಿಸಬೇಕಾಗಬಹುದು ಎಂದು ವಿದ್ಯಾರ್ಥಿಗಳಿಗೆ ವಿತ್ತ ಸಚಿವೆ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ನಗರದ ಅಮರಾವತಿ ಸರ್ಕಾರಿ ಬಾಲಕಿಯರ ಪಿಯು ಕಾಲೇಜ್‌ನಲ್ಲಿ ಶನಿವಾರ ಒಂದು ಕೋಟಿ ರೂ.ವೆಚ್ಚ ಐದು ವಿಜಯ ಪಥ ಪ್ರಾಜೆಕ್ಟ್ ಗೆ (ಎಐ ಲ್ಯಾಬ್) ಚಾಲನೆ ನೀಡಿ ಮಾತನಾಡಿದರು.
ತಂತ್ರಜ್ಞಾನ ಜಗತ್ತು ಅತೀ ವೇಗವಾಗಿ ಬೆಳೆಯುತ್ತಿದ್ದು, ಬದಲಾಗುತ್ತಿರುವ ಸನ್ನಿವೇಶಗಳಿಗೆ ತಕ್ಕಂತೆ ಈಗಿನ ವಿದ್ಯಾರ್ಥಿಗಳು ಪ್ರಸ್ತುತ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುವುದು ಅಗತ್ಯವಾಗಿದೆ. ಹೀಗಾಗಿ ಎಐ ತಂತ್ರಜ್ಞಾನವನ್ನು ಪ್ರಾಥಮಿಕ ಶಿಕ್ಷಣದಿಂದ ಎಲ್ಲಾ ಕ್ಷೇತ್ರದ ವಿದ್ಯಾರ್ಥಿಗಳು ತಮ್ಮ ಕಲಿಕಾ ಹಂತದಲ್ಲೇ ಬಳಸಿಕೊಂಡು ನೈಪುಣ್ಯತೆಯನ್ನು ಪಡೆಯುವುದು ಅನಿವಾರ್ಯವಾಗಿದೆ ಎಂದರು‌.
ಎಐ ಪ್ರತಿ ವಿದ್ಯಾರ್ಥಿಯ ಕಲಿಕೆಯ ವೇಗ ಮತ್ತು ಶೈಲಿಗೆ ಅನುಗುಣವಾಗಿ ಕಲಿಕೆಗೆ ಹೆಚ್ಚಿನ ಸಮಯವನ್ನು ಮೀಸಲಿಡಲು ಸಹಾಯ ಮಾಡುತ್ತದೆ, ಇದರಿಂದಾಗಿ ಕಲಿಕೆಯನ್ನು ಎಲ್ಲರಿಗೂ ಕೈಗೆಟಕುವಂತೆ ಮಾಡುತ್ತದೆ. ಜತೆಗೆ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುತ್ತದೆ. ಯಾವುದೇ ವಿಷಯವನ್ನು ಪರಿಣಾಮಕಾರಿಯಾಗಿ ಅರ್ಥ ಮಾಡಿಕೊಳ್ಳಲು ಮತ್ತು ದಿನನಿತ್ಯದ ಬದುಕಿನಲ್ಲಿ ಸೃಜನಶೀಲ ಚಿಂತನೆಗೆ ಈ ಎಐ ಸಹಾಯಕವಾಗಿದೆ ಎಂದರು‌.
ಐಎಎಸ್ ಅನಿರುದ್ಧ ಶ್ರವಣ್, ಶಾಸಕ ಎಚ್‌.ಆರ್.ಗವಿಯಪ್ಪ, ಡಿಸಿ ಕವಿತಾ ಮನ್ನಿಕೇರಿ, ಎಸ್ಪಿ ಎಸ್ ಜಾಹ್ನವಿ ಇತರರಿದ್ದರು.

ಕನ್ನಡದಲ್ಲೇ ಮಾತನಾಡಿ

ಎಐ ಲ್ಯಾಬ್ ಉದ್ಘಾಟನೆಗೆ ಆಗನಿಸಿದ ವಿತ್ತ ಸಚಿವೆ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿದ್ಯಾರ್ಥಿನಿಯರು ಇಂಗ್ಲಿಷ್ ನಲ್ಲಿ ಎಐ ಬಗ್ಗೆ ವಿವರಿಸಿದರು. ಆದರೆ, ಎಐ ಬಗ್ಗೆ ಪ್ರಶ್ನೆ ಮಾಡಿದಾಗ ತಡವರಿಸಿದರು. ಆದ್ದರಿಂದ ಕನ್ನಡ ವಿದ್ಯಾರ್ಥಿಗಳು ನೀವು ಕನ್ನಡದಲ್ಲೇ ಮಾತನಾಡಿ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net