KPSC ನೇಮಕಾತಿಗಳಲ್ಲಿ ಅಕ್ರಮ ಆರೋಪ; ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರ್ಕಾರ | State government

ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ನೇಮಕಾತಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಎಸ್​ಐಟಿ ರಚಿಸಿ ಹೈಕೋರ್ಟ್​ ನೀಡಿದ್ದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on: 

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ವಿವಿಧ ನೇಮಕಾತಿಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಎಸ್​ಐಟಿ ರಚಿಸಿ ಹೈಕೋರ್ಟ್​ ನೀಡಿದ್ದ ಆದೇಶದ ವಿರುದ್ಧ ರಾಜ್ಯ ಸರ್ಕಾರ ಎಸ್​ಎಲ್​ಪಿ ಮೂಲಕ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದೆ.

ಪ್ರಕರಣದ ತನಿಖೆ ನಡೆಸುವ ಎಸ್​ಐಟಿಯ ನೇತೃತ್ವ ವಹಿಸಬೇಕಾದ ಅಧಿಕಾರಿಯನ್ನು ಸ್ವತಃ ಹೈಕೋರ್ಟ್​ ಸೂಚಿಸಿದ್ದನ್ನು ರಾಜ್ಯ ಸರ್ಕಾರ ಆಕ್ಷೇಪಿಸಿದೆ. ಈಗಾಗಲೇ ಪ್ರಕರಣದ ತನಿಖೆಯನ್ನು ಸಿಐಡಿ ಶೇ.80ರಷ್ಟು ಮುಗಿಸಿದ್ದು, ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು, ಹಲವು ಆರೋಪಿಗಳನ್ನು ಬಂಧಿಸಿದೆ.

ಸಿಐಡಿ ಅಧಿಕಾರಿಗಳೇ ದಕ್ಷವಾಗಿ ಕೆಲಸ ಮಾಡುತ್ತಿರುವಾಗ ನಿರ್ಧಿಷ್ಠ ಅಧಿಕಾರಿಯನ್ನು ಗುರುತಿಸಿ ಪ್ರತ್ಯೇಕ ತನಿಖೆಗೆ ಆದೇಶಿಸುವುದು ತಪ್ಪು ಸಂದೇಶ ರವಾನೆಯಾಗುತ್ತದೆ. ಈ ಹಿನ್ನೆಲೆ ಆದೇಶಕ್ಕೆ ತಡೆ ನೀಡುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದೆ.

Also Read
ಗಾಂಧಿ ಪರಿವಾರ v/s ಸಂಘ ಪರಿವಾರ; ಭಾರತದ ಭವಿಷ್ಯಕ್ಕಾಗಿ ಈ ಎರಡು ಪರಿವಾರಗಳ ನಡುವೆ ಹೋರಾಟ: ಸಿಎಂ ರೇವಂತ್ ರೆಡ್ಡಿ | CM Revanth Reddy
ಸಾಂದರ್ಭಿಕ ಚಿತ್ರ

ಕಳೆದ ಎರಡು ದಿನಗಳ ಹಿಂದೆ ಹೈಕೋರ್ಟ್ ಆದೇಶದ ಬಗ್ಗೆ ಪ್ರತಿಕ್ರಿಯಿಸಿದ್ದ ಸಿಎಂ ಡಿ.ಕೆ.ಶಿವಕುಮಾರ್, ಎಸ್‌ಐಟಿ ರಚನೆಗೆ ನ್ಯಾಯಾಲಯ ಆದೇಶಿಸಬಹುದಾದರೂ, ಯಾವ ಅಧಿಕಾರಿಯನ್ನು ತನಿಖಾ ತಂಡಕ್ಕೆ ನೇಮಿಸಬೇಕು ಎಂಬುದು ಸರ್ಕಾರಕ್ಕೆ ಬಿಟ್ಟ ವಿಚಾರ. ಇದರಲ್ಲಿ ನ್ಯಾಯಾಲಯಗಳು ಹಸ್ತಕ್ಷೇಪ ಮಾಡೋದು ಸರಿಯಲ್ಲ ಎಂದಿದ್ದರು.

ಪಶು ವೈದ್ಯಾಧಿಕಾರಿಗಳ ನೇಮಕಾತಿ ಸೇರಿ ವಿವಿಧ ನೇಮಕಾತಿಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಿಬಿಐ ತನಿಖೆ ಕೋರಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್​ನ ನ್ಯಾ.ನಾಗಪ್ರಸನ್ನ ಅವರ ನೇತೃತ್ವದ ಪೀಠವು, ಸೋಮವಾರ(ಸೆ. 21) ಹಿರಿಯ ಐಪಿಎಸ್​ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಎಸ್​ಐಟಿ ರಚಿಸಿ ತನಿಖೆಗೆ ಆದೇಶ ನೀಡಿತ್ತು.

100 ದಿನಗಳಲ್ಲಿ ತನಿಖೆ ಮಾಡಿ ವರದಿ ಸಲ್ಲಿಸಬೇಕು. ಈಗಾಗಲೇ ಪ್ರಕರಣ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಪಿಎಂಎಲ್​ಎ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಈ ಹಿನ್ನೆಲೆ ಪರಸ್ಪರ ಸಹಕಾರ ಮೂಲಕ ಎರಡೂ ಏಜೆನ್ಸಿಗಳು ತನಿಖೆ ನಡೆಸಬೇಕು. ಸರ್ಕಾರದ ಎಲ್ಲಾ ಇಲಾಖೆಗಳು ತನಿಖೆಗೆ ಸಂಪೂರ್ಣ ನೆರವು ನೀಡಬೇಕು ಎಂದು ನಿರ್ದೇಶಿಸಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net