ಸೇಡಂ: ರಂಜೋಳ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮಂಗಳವಾರ ಬೆಳಗ್ಗೆ 11.30ಕ್ಕೆ ಆಯೋಜಿಸಲಾಗಿದೆ ಎಂದು ಮೂರ್ತಿ ಅನಾವರಣಾ ಸಮಿತಿ ಅಧ್ಯಕ್ಷ ಸತೀಶರೆಡ್ಡಿ ಪಾಟೀಲ್ ರಂಜೋಳ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೀದರ್ನ ಭಂತೆ ವರಜ್ಯೋತಿ, ಕೋಡ್ಲಾದ ಶ್ರೀ ಜ್ಞಾನಪ್ರಕಾಶ ಸ್ವಾಮೀಜಿ, ಗುರುಮಠಕಲ್ನ ಶ್ರೀ ಮುರುರಾಜೇಂದ್ರ ಸ್ವಾಮೀಜಿ ವಹಿಸಲಿದ್ದಾರೆ. ವೈದ್ಯಕಿಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಪ್ರತಿಮೆ ಅನಾವರಣಗೊಳಿಸಿದರೆ, ಸಚಿವ ಪ್ರಿಯಾಂಕ್ ರ್ಖಗೆ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಿದ್ದಾರೆ. ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ, ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ್ ಜ್ಯೋತಿ ಬೆಳಗಿಸಲಿದ್ದಾರೆ. ಅಲ್ಟ್ರಾಟೆಕ್ ಸಿಮೆಂಟ್ ಕಾರ್ಮಿಕರ ಸಂದ ಅಧ್ಯಕ್ಷ ಸತೀಶರೆಡ್ಡಿ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಬಸವರಾಜ ಪಾಟೀಲ್ ಊಡಗಿ, ಜಿಪಂ ಮಾಜಿ ಸದಸ್ಯ ದೂಳಪ್ಪ ದೊಡ್ಡಮನಿ, ಪುರಸಭೆ ಮಾಜಿ ಅಧ್ಯಕ್ಷ ವೀರೇಂದ್ರ ರುದ್ನೂರ, ಮಾಜಿ ಸದಸ್ಯ ಅಬ್ದುಲ್ ರಸೀದ್ ರಂಜೋಳ, ಕಾಡಾ ಮಾಜಿ ಅಧ್ಯಕ್ಷ ಮಹಾಂತಪ್ಪ ಸಂಗಾವಿ ಸೇರಿ ಹಲವರು ಭಾಗಿಯಾಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ವಿವಿಧ ೇತ್ರಗಳಲ್ಲಿ ಸಾಧನೆಗೈದ ಮಹಾದೇವಪ್ಪ ದಿಡ್ಡಿಮನಿ, ಆನಂದರಾವ್, ನಾಗಮ್ಮ ದಂಡುಮ, ಸೋಮಶೇಖರ ಒಡೆಯರ್, ಶ್ರೀಕಾಂತ ಗಡ್ಡಿಮನಿ, ನಾಗೇಂದ್ರ ಮೈಲಾರಿ, ಮಹೇಶ, ವಿಜಯಕುಮಾರ, ನರೇಶ ಪಾಕಾಲ್, ಅಬ್ದುಲ್ ರಹಿಮಾನ್, ವೆಂಕಟೇಶ, ಅನೀಲಕುಮಾರ ಅವರನ್ನು ವಿಶೇಷವಾಗಿ ಸನ್ಮಾನಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.