ಸಮಾನತೆ ಸಾರಿದ ನಾಯಕ ಅಂಬೇಡ್ಕರ್​

Ambedkar, the leader who preached equality
Ambedkar, the leader who preached equality
Published on
ಪಾವಗಡ: ಡಾ.ಬಿ.ಆರ್​.ಅಂಬೇಡ್ಕರ್​ ಜಾತಿ ಪದ್ಧತಿ, ಅಸಶ್ಯತೆಯ ವಿರುದ್ಧ ಹೋರಾಡಿ ಸಂವಿಧಾನದಡಿಯಲ್ಲಿ ಸಮಾಜದಲ್ಲಿ ಪ್ರತಿಯೊಬ್ಬರಿಗೂ ಸಮಾನ ಹಕ್ಕುಗಳನ್ನು ಒದಗಿಸಿಕೊಟ್ಟ ಮಹಾನ್​ ನಾಯಕ ಎಂದು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ತಿಳಿಸಿದರು.
ತಾಲೂಕಿನ ಕರೆಕ್ಯಾತನಹಳ್ಳಿಯಲ್ಲಿ ಶನಿವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್​.ಅಂಬೇಡ್ಕರ್​, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನ ರಾಮ್​ ಜಯಂತಿ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡಾ.ಬಿ.ಆರ್​.ಅಂಬೇಡ್ಕರ್​ ವಿಶ್ವದಲ್ಲೇ ಜ್ಞಾನದ ಸಂಕೇತವಾಗಿದ್ದಾರೆ. ಇಂದಿನ ಯುವ ಪೀಳಿಗೆ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕಿದೆ. ಪಾಲಕರು ತಮ್ಮ ಮಕ್ಕಳಿಗೆ ಉನ್ನತ ವಿದ್ಯಾಭ್ಯಾಸ ಕೊಡಿಸುವ ಕಡೆ ಗಮನ ಹರಿಸಿ, ಮಕ್ಕಳನ್ನು ಶಿಕ್ಷಣದ ಜತೆಗೆ ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದರು.
ಬಾಬು ಜಗಜೀವನ ರಾಮ್​ ದೇಶದ ರೈತ ಮತ್ತು ಕಾರ್ಮಿಕರ ಹಕ್ಕಿಗಾಗಿ ಹೋರಾಡಿದವರು. ಅವರ ಕಾಲಾವಧಿಯಲ್ಲಿ ದೇಶದ ಕೃಷಿ ಮತ್ತು ರಕ್ಷಣಾ ಕ್ಷೇತ್ರದಲ್ಲಿ ಮಾಡಿದ ಸುಧಾರಣೆಗಳು ಮರೆಯಲಾಗದು. ಅವರ ದಕ್ಷ ಆಡಳಿತ ಮತ್ತು ದೇಶಪ್ರೇಮ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕೊಟ್ಟಾ ಶಂಕರ್​, ವಕೀಲ ಶಿವಣ್ಣ, ಕೆಂಚಾರಯ ಮಾತನಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕರೆಕ್ಯಾತನಹಳ್ಳಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net