ಭೀಮನಗರ ಬುದ್ದ ವಿಹಾರದ ಭಂತೆ ವರಜ್ಯೋತಿ ಅವರ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತರಾದ ಜಹೀರಾ ನಸೀಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಹನಾಗರ ಪಾಲಿಕೆಯ ಆಯುಕ್ತ ಅವಿನಾಶ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಮನಿ, ಡಿ.ಎಚ್.ಓ ಡಾ.ಶರಣಬಸಪ್ಪ ಕ್ಯಾತನಾಳ, ಕಲಬುರಗಿ ತಹಶೀಲ್ದಾರ ಆನಂದಶೀಲ, ಡಾ.ಬಿ.ಆರ್.ಅಂಬೇಡ್ಕರ್ ಜಯಂತ್ಯೋತ್ಸವ ಆಚರಣೆ ಸಮಿತಿಯ ಜಿಲ್ಲಾಧ್ಯಕ್ಷ ಅಶೋಕ ವೀರನಾಯಕ, ಕರ್ನಾಟಕ ರಾಜ್ಯ ಸರ್ಕಾರಿ-ಅರೆ ಸರ್ಕಾರಿ ಎಸ್.ಸಿ-ಎಸ್.ಟಿ ನೌಕರರ ಸಂಘದ ರಾಜ್ಯಾಧ್ಯಕ್ಷ ಮಹೇಶ ಹುಬ್ಳಿ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಡಿ.ಎಸ್.ಎಸ್. ಮುಖಂಡರಾದ ಪ್ರಕಾಶ ಮೂಲಭಾರತಿ ಸುರೇಶ ಹಾದಿಮನಿ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು, ವಿವಿಧ ಸಮಾಜದ ಮುಖಂಡರು ಭಾಗವಹಿಸಿದ್ದರು. ಮಾರುತಿ ಬೇಂದ್ರ ಸ್ವಾಗತಿಸಿದರು. ಸಹ ಶಿಕ್ಷಕ ಸಂತೋಷ್ ಕಲಕೇರಾ ಸಂವಿಧಾನ ವಾಚಿಸಿದರು.