ಅಂಬೇಡ್ಕರ್​ ವಿಚಾರಧಾರೆ ಸಮಾಜಕ್ಕೆ ದಾರಿದೀಪ

ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಡಾ.ಬಿ.ಆರ್​.ಅಂಬೇಡ್ಕರ್​ ಜಯಂತಿ ಆಚರಿಸಲಾಯಿತು. ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪಪ್ರಾಚಾರ್ಯ ಸಿದ್ರಾಮ ಗೊಗ್ಗಾ ಇತರರಿದ್ದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಡಾ.ಬಿ.ಆರ್​.ಅಂಬೇಡ್ಕರ್​ ಜಯಂತಿ ಆಚರಿಸಲಾಯಿತು. ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪಪ್ರಾಚಾರ್ಯ ಸಿದ್ರಾಮ ಗೊಗ್ಗಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಬಸವರಾಜ ಮೊಳಕೀರೆ ಅಭಿಮತ
  • ಚನ್ನಬಸವೇಶ್ವರ ಗುರುಕುಲದಲ್ಲಿ ಜಯಂತಿ
ಭಾಲ್ಕಿ: ಡಾ.ಬಿ.ಆರ್​. ಅಂಬೇಡ್ಕರ್​ ಅವರ ವಿಚಾರಧಾರೆಗಳು ಸಮಾನತೆ, ಸ್ವಾತಂತ್ರ, ಭ್ರಾತೃತ್ವ ಮತ್ತು ಸಾಮಾಜಿಕ ನ್ಯಾಯದ ತಳಹದಿಯ ಮೇಲೆ ನಿಂತಿರುವ ಶ್ರೇಷ್ಠ ಮಾನವತಾವಾದಿ ಚಿಂತನೆಗಳಾಗಿವೆ ಎಂದು ಪ್ರಾಚಾರ್ಯ ಬಸವರಾಜ ಮೊಳಕೀರೆ ಹೇಳಿದರು.
ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದಲ್ಲಿ ಮಂಗಳವಾರ ಆಯೋಜಿಸಿದ್ದ ಡಾ.ಬಿ.ಆರ್​.ಅಂಬೇಡ್ಕರ್​ ಅವರ 135ನೆಯ ಜಯಂತ್ಯುತ್ಸವದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸಂವಿಧಾನ ಶಿಲ್ಪಿಯಾಗಿ ಅಂಬೇಡ್ಕರ್​ ಶೋಷಿತರ ಧ್ವನಿಯಾಗಿ, ಶಿಕ್ಷಣ ಮತ್ತು ಮಹಿಳಾ ಸಬಲೀಕರಣದ ಪ್ರತಿಪಾದಕರಾಗಿ ಅವರು ನೀಡಿದ ಕೊಡುಗೆಗಳು ಭಾರತೀಯ ಸಮಾಜವನ್ನು ಸುಧಾರಿಸುವಲ್ಲಿ ದಾರಿದೀಪವಾಗಿವೆ. ವಿದ್ಯಾರ್ಥಿಗಳು ಅಂಬೇಡ್ಕರ್​ ಅವರ ವಿಚಾರಧಾರೆ ಮೈಗೂಡಿಸಿಕೊಂಡು ತಮ್ಮ ಜೀವನವನ್ನು ಉತ್ತಮವಾಗಿ ರೂಪಿಸಿ ಕೊಳ್ಳಬೇಕು ಎಂದು ತಿಳಿಸಿದರು.
ಉಪ ಪ್ರಾಚಾರ್ಯ ಸಿದ್ರಾಮ ಗೊಗ್ಗಾ, ಸಿಬಿಎಸ್​ ಇ ಪ್ರಿನ್ಸಿಪಲ್​ ಎನ್​.ರಾಜು, ಲಚಮಾ ರೆಡ್ಡಿ, ಹಣಮಂತ ಜ್ಯಾಂತಿಕರ್​, ಶಶಿಧರ ಕುಲಕರ್ಣಿ, ಬಲಭೀಮ ಸುತಾರ್​ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net