ಅಂಬೇಡ್ಕರ್ ಹೋರಾಟ ನಮಗೆಲ್ಲ ದಾರಿದೀಪ

Ambedkar's struggle is a guiding light for us all.
Ambedkar's struggle is a guiding light for us all.
Published on
ಗುಬ್ಬಿ: ಸಮಾನತೆ, ಸ್ವಾತಂತ್ರ್ಯ ಮತ್ತು ಬಾಂಧವ್ಯ ಎಂಬ ಮೌಲ್ಯಗಳನ್ನು ನಮ್ಮ ಸಮಾಜದಲ್ಲಿ ಬಿತ್ತಿದ ಮಹನೀಯ ಡಾ.ಬಿ.ಆರ್.ಅಂಬೇಡ್ಕರ್ ಎಂದು ತಹಸೀಲ್ದಾರ್ ಬಿ.ಆರತಿ ತಿಳಿಸಿದರು.\
ತಾಲೂಕು ಆಡಳಿತದಿಂದ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ತಾಲೂಕು ಕಚೇರಿಯಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಹಾಗೂ ಬಾಬೂಜಿ ಜಯಂತಿಯಲ್ಲಿ ಭಾವಚಿತ್ರಕ್ಕೆ ಪುಷ್ಪಾರ್ಜನೆ ಸಲ್ಲಿಸಿ ಮಾತನಾಡಿ, ಶೋಷಿತರು, ಪೀಡಿತರು ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಅವರು ನಡೆಸಿದ ಹೋರಾಟ ಇಂದಿಗೂ ನಮಗೆ ದಾರಿದೀಪವಾಗಿದೆ. ಅವರ ಆದರ್ಶಗಳು ಮತ್ತು ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸಮಾನತೆಯ, ನ್ಯಾಯದ ಮತ್ತು ಸೌಹಾರ್ದತೆಯ ಸಮಾಜ ನಿರ್ಮಾಣಕ್ಕೆ ನಾವು ಪ್ರತಿಜ್ಞೆ ಮಾಡೋಣ ಎಂದು ತಿಳಿಸಿದರು.
ಇದೇ ವೇಳೆ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ತಾಪಂ ಇಒ ರಂಗನಾಥ್, ಪಪಂ ಮುಖ್ಯಾಧಿಕಾರಿ ಮಂಜುಳಾದೇವಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಎಸ್.ವೀಣಾ, ಟಿ.ಎಚ್‌ಒ ಡಾ.ಬಿಂದು ಮಾಧವ, ಮಾಜಿ ಜಿಪಂ ಸದಸ್ಯ ಜಿ.ಎಚ್.ಜಗನಾಥ್, ಛಲವಾದಿ ಮಹಾಸಭಾ ಅಧ್ಯಕ್ಷ ಟಿ.ಇ.ಈರಣ್ಣ, ಕಿಟ್ಟದ ಗುಪ್ಪೆ ನಾಗರಾಜ್, ಈಶ್ವರಯ್ಯ, ಕಡಬ ಶಂಕರ್ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net