ವಡ್ಡರಹಳ್ಳಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅನುದಾನದಡಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಒಂದು ಕೋಟಿ ರೂ. ಅನುದಾನ ನೀಡಿದ್ದು, ಸರ್ಕಾರದ ಇತರೆ ಸಾಮಾನ್ಯ ಅನುದಾನದಡಿ ಒಂದು ಕೋಟಿ ನೀಡುವ ಮೂಲಕ ಗ್ರಾಮಕ್ಕೆ ಉತ್ತಮ ಚರಂಡಿ ವ್ಯವಸ್ಥೆ ಕಲ್ಪಿಸಲಾಗುವುದು. ಗ್ರಾಮಕ್ಕೆ ಸ್ವಾಗತ ಕಮಾನು ನಿಮಾರ್ಣ ಹಾಗೂ ಶ್ರೀ ವೆಂಕಟರಮಣ ಸ್ವಾಮಿ ದೇವಾಲಯದ ಅಭಿವೃದ್ಧಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಈಗಾಗಲೇ ಮುಜರಾಯಿ ಇಲಾಖೆಗೆ 5 ಕೋಟಿ ರೂ. ಅನುದಾನ ಬಿಡುಗಡೆಗೊಳಿಸುವಂತೆ ಪತ್ರ ರವಾನೆ ಮಾಡಿದ್ದೇನೆ ಎಂದರು. ಫಲಾನುಭವಿಗಳಿಗೆ ಇ&-ಖಾತೆ, ಆಯುಷ್ಮಾನ್ ಕಾರ್ಡ್ ವಿತರಿಸಿ, ನೀರಿನ ಘಟಕ ಉದ್ಘಾಟಿಸಲಾಯಿತು.