ಆಂಧ್ರ ಸರ್ಕಾರ ಈ ಮಟ್ಟಕ್ಕೆ ಹೋಗುತ್ತದೆ ಎಂದು ಎಣಿಸಿರಲಿಲ್ಲ. 12 ವರ್ಷದಿಂದ ಈ ವಿಚಾರವಾಗಿ ನೋಟಿಫಿಕೇಷನ್ ಮಾಡಿ ಎಂದು ಒತ್ತಡ ಹೇರುತ್ತಲೇ ಇದ್ದೇವೆ. 2010ರ ಡಿಸೆಂಬರ್ 30ರಲ್ಲಿ ಈ ಬಗ್ಗೆ ತೀರ್ಮಾನವಾಗಿದ್ದು, 177 ಟಿಎಂಸಿಯಿಂದ 330 ಟಿಎಂಸಿ ನೀರು ಬಳಕೆಗೆ ಅವಕಾಶ ನೀಡಲಾಗಿತ್ತು. ನವಿಲೆ ಸಮತೋಲಿತ ಅಣೆಕಟ್ಟು ನಮ್ಮ ಪಾಲಿನ 30 ಟಿಎಂಸಿ ನೀರನ್ನು ಕೊಳ್ಳಬೇಕು ಎಂದು ಬೋರ್ಡ್ ಮುಂದೆ ತಿಳಿಸಿದ್ದೇವೆ. ಈ ವಿಚಾರವನ್ನು ತೆಗೆದುಕೊಳ್ಳುತ್ತಿಲ್ಲ ಮತ್ತು ಆಂಧ್ರ ಸರ್ಕಾರ ಸಭೆಗೂ ಬರುತ್ತಿಲ್ಲ. ಇಬ್ಬರೂ ಸೇರಿ ತೀರ್ಮಾನ ಮಾಡಬೇಕು, ಖರ್ಚು ಮಾಡಬೇಕು. ನಮ್ಮ ನೀರು ಅವರಿಗೆ ಹರಿದು ಹೋಗುತ್ತಿದೆ. ಈ ಬಗ್ಗೆ ಚರ್ಚಿಸಲು ಸಭೆಗೆ ಬಾರದೆ ಕೇಂದ್ರಕ್ಕೆ ಪತ್ರ ಬರೆದು ಗೊಂದಲ ಮೂಡಿಸುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಆಕ್ಷೇಪ ವ್ಯಕ್ತಪಡಿಸಿದರು.