ಸಂಜೆ ಆರು ಗಂಟೆಯ ಸುಮಾರಿಗೆ ಕಾಣಿಸಿಕೊಂಡ ಬೆಂಕಿ, ಸ್ಕ್ರಾಪ್‌ನಲ್ಲಿ ಪ್ಲಾಸ್ಟಿಕ್ ಸೇರಿದಂತೆ ದಹನಕಾರಿ ವಸ್ತುಗಳಿದ್ದ ಕಾರಣ ಕ್ಷಣಾರ್ಧದಲ್ಲಿ ಐದು ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ. ಕಳೆದ ಹಲವಾರು ವರ್ಷಗಳಿಂದ ಈ ಸ್ಥಳದಲ್ಲಿ ಬಾಂಗ್ಲಾದೇಶದ ಮೂಲದ ವಲಸಿಗರು ನೆಲೆಸಿದ್ದು, ಇಲ್ಲಿ ಸ್ಕ್ರಾಪ್ ಸಂಗ್ರಹಣೆ ಮಾಡಲಾಗುತ್ತಿತ್ತು. ಇತ್ತೀಚೆಗಷ್ಟೇ ಈ ವಲಸಿಗರು ಶೆಡ್‌ಗಳನ್ನು ಖಾಲಿ ಮಾಡಿದ್ದರು ಎನ್ನಲಾಗಿದ್ದು, ಈ ನಡುವೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.