ಅಂಗನವಾಡಿ ಹುದ್ದೆಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ
ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ
Published on
ಸವದತ್ತಿ: ತಾಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಲೂಕಿನ ವಿವಿಧೆಡೆ ಖಾಲಿ ಇರುವ 10 ಅಂಗನವಾಡಿ ಕಾರ್ಯಕರ್ತೆ ಹಾಗೂ 19 ಅಂಗನವಾಡಿ ಸಹಾಯಕಿಯರ ಹುದ್ದೆ ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅರ್ಹ ಸ್ಥಳಿಯ ಮಹಿಳಾ ಅಭ್ಯರ್ಥಿಗಳು ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳೆಯರಿಂದ ಆ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೇ 14ರಿಂದ ಜೂ.16ರ ಸಂಜೆ 5.30 ಗಂಟೆಯೊಳಗೆ ಅರ್ಜಿ ಸಲ್ಲಿಸಬೇಕು. ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸವದತ್ತಿ ತಾಲೂಕು ಕಚೇರಿಗೆ ಖುದ್ದಾಗಿ ಅಥವಾ ನೊಂದಾಯಿತ ಅಂಚೆ ಮೂಲಕ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಶಿಶು ಅಭಿವದ್ಧಿ ಯೋಜನಾಧಿಕಾರಿಗಳ ಕಚೇರಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸವದತ್ತಿ ತಾಲೂಕು ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net