ಅಂಗನವಾಡಿ ನೌಕರರ ಸೇವೆ ಕಾಯಂಗೆ ಪಟ್ಟು

Anganwadi workers' service is always on point
Anganwadi workers' service is always on point
Published on
ತುರುವೇಕೆರೆ : ಕೇಂದ್ರ ಸರ್ಕಾರದ ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ವಿವಿಧ ಸಂಟನೆಗಳ ಪದಾಧಿಕಾರಿಗಳು ಇತ್ತೀಚೆಗೆ ಪಟ್ಟಣದಲ್ಲಿ ಇತ್ತೀಚೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪಟ್ಟಣದ ಗ್ರಾಮ ದೇವತೆ ಉಡುಸಲಮ್ಮ ದೇವಾಲಯದ ಮುಂಭಾಗದಿಂದ ಹೊರಟ ಪ್ರತಿಭಟನಾಕಾರರ ಮೆರವಣಿಗೆ ಬಾಣಸಂದ್ರ ವೃತ್ತದಲ್ಲಿ ಮಾನವ ಸರಪಳಿ ರಚಿಸಿ, ನಂತರ ತಾಲೂಕು ಕಚೇರಿ ಮುಂದೆ ಸಮಾವೇಶಗೊಂಡು ವಿವಿಧ ಘೋಷಣೆಗಳನ್ನು ಕೂಗಿದರು.
ತಾಲೂಕು ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಸಂತಕುಮಾರಿ ಮಾತನಾಡಿ, ಅಂಗನವಾಡಿ ನೌಕರರನ್ನು ಕಾಯಂ ಮಾಡಬೇಕು, ಕನಿಷ್ಠ 26 ಸಾವಿರ ರೂ. ವೇತನ ನೀಡಬೇಕು. ಶಿಕ್ಷಣ ಇಲಾಖೆಯಿಂದಲೇ ಎಲ್​ಕೆಜಿ ಮತ್ತು ಯುಕೆಜಿ ತರಗತಿಗಳನ್ನು ತೆರೆಯಲಾಗುತ್ತಿದೆ. ಅದನ್ನು ನಿಲ್ಲಿಸಿ ಅಂಗನವಾಡಿಗಳಲ್ಲೇ ತೆರೆಯಬೇಕು. ಅಂಗನವಾಡಿ ನೌಕರರಿಗೆ ತೊಂದರೆಯುಂಟು ಮಾಡುತ್ತಿರುವ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿದರು.
ಅಂಗನವಾಡಿ ನೌಕರರಿಗೆ ಮುಟ್ಟಿನ ರಜೆ ನೀಡಬೇಕು. ಐಸಿಡಿಎಸ್​ ಯೋಜನೆಯನ್ನು ಕಾಯಂಗೊಳಿಸಬೇಕು. ಘಟಕ ವೆಚ್ಚ ಹೆಚ್ಚಿಸಬೇಕು. ಕೇಂದ್ರ ಸರ್ಕಾರ ಕೂಡಲೇ ವೇತನ ಹೆಚ್ಚುವರಿ ಮಾಡಬೇಕು. ಎಫ್​ಆರ್​ಎಸ್​ ಅನ್ನು ರದ್ದುಗೊಳಿಸಿ ಎಲ್ಲ ಅಂಗನವಾಡಿ ಕೇಂದ್ರಗಳಿಗೆ ವೈಫೈ ನೀಡಬೇಕು. ಚುನಾವಣೆ ಕೆಲಸದಿಂದ ಬಿಡುಗಡೆಗೊಳಿಸಬೇಕು ಮತ್ತು ಅಂಗನವಾಡಿ ನೌಕರರನ್ನು ಮೂರನೇ ಮತ್ತು ನಾಲ್ಕನೇ ದರ್ಜೆಯ ನೌಕರರೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್​ ಅವರಿಗೆ ಮನವಿ ಸಲ್ಲಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net