ಎಂ.ಎನ್.ಕೋಟೆ: ಗುಬ್ಬಿ ತಾಲೂಕಿನ ಬೊಮ್ಮರಸನಹಳ್ಳಿಯ ಶ್ರೀ ಆಂಜನೇಯಸ್ವಾಮಿ ಹಾಗೂ ಶ್ರೀ ಬಸವೇಶ್ವರಸ್ವಾಮಿ ಮಹಾ ರಥೋತ್ಸವ ಸಾವಿರಾರು ಭಕ್ತರ ಸಮ್ಮಖದಲ್ಲಿ ಬುಧವಾರ ವೈಭವದಿಂದ ನೆರವೇರಿತು.
ರಥೋತ್ಸವದ ಪ್ರಯುಕ್ತ ಬೆಳಗ್ಗೆ ದೇವಾಲಯದಲ್ಲಿ ದೇವರಿಗೆ ಅಭಿಷೇೀಕ, ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಹೂವಿನ ಅಲಂಕಾರ ವಾಡಲಾಯಿತು. ಮಧ್ಯಾಹ್ನ ಮಹಾ ರಥೋತ್ಸವಕ್ಕೆ ಮೂರ್ತಿಯನ್ನು ಪ್ರತಿಷ್ಠಾಪಿಸುತಿದ್ದಂತೆ ನೆರೆದಿದ್ದ ಭಕ್ತರ ಹರ್ಷೋದ್ಧಾರ ಮುಗಿಲು ಮುಟ್ಟಿತ್ತು. ರಥೋತ್ಸವದಲ್ಲಿ ಭಕ್ತರು ನಾ ಮುಂದು, ತಾ ಮುಂದು ಎಂದು ರಥವನ್ನು ಎಳೆದರು.
ರಥೋತ್ಸವಕ್ಕೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ರಥಕ್ಕೆ ಬಾಳೆಹಣ್ಣು, ದವರ ಎಸೆದು ಭಕ್ತಿ ಸಮರ್ಪಿಸಿದರು. ಲಿಂಗದ ವೀರರ ಕುಣಿತ, ನಂದಿ ಧ್ವಜಾ ಹಾಗೂ ಬಾಣ ಬಿರುಸುಗಳೊಂದಿಗೆ ರಥೋತ್ಸವ ಅದ್ದೂರಿಯಾಗಿ ನೆರವೇರಿತು. ಭಕ್ತರಿಗೆ ಪಾನಕ, ಫಲಹಾರ ಮಜ್ಜಿಗೆ ವಿತರಿಸಲಾಯಿತು.