29 ರಿಂದ ಕರಡಿಗೋಡು ಬಸವೇಶ್ವರ ದೇವರ ವಾರ್ಷಿಕೋತ್ಸವ

ಕರಡಿಗೋಡು ಬಸವೇಶ್ವರ ದೇವಸ್ಥಾನ
ಕರಡಿಗೋಡು ಬಸವೇಶ್ವರ ದೇವಸ್ಥಾನ
Published on
ಸಿದ್ದಾಪುರ: ಸಮೀಪದ ಕರಡಿಗೋಡು ಗ್ರಾಮದ ಕುಕ್ಕುನೂರು ಕುಟುಂಬದವರಿಂದ ಆರಾಧಿಸಲಾಗುವ ಶ್ರೀ ಬಸವೇಶ್ವರ ದೇವರ ವಾರ್ಷಿಕೋತ್ಸವವು ಮಾ. 29, 30 ಮತ್ತು 31ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಮಾ. 29ರಂದು ಭಾನುವಾರ ಸಂಜೆ ಗೋ ಪೂಜೆ ಹಾಗೂ ನಿತ್ಯ ಪೂಜೆಯ ನಂತರ ರಾತ್ರಿ 7.30 ಗಂಟೆಗೆ ಭಂಡಾರದ ಮನೆಯಿಂದ ದೇವರ ಭಂಡಾರವನ್ನು ದೇವಸ್ಥಾನಕ್ಕೆ ತರಲಾಗುತ್ತದೆ.
ಮಾ.30ರಂದು ಸೋಮವಾರ ಬೆಳಗ್ಗೆ 8.30 ಗಂಟೆಗೆ ಗಣಪತಿ ಹೋಮ, 10 ಗಂಟೆಗೆ ಕಲಶ ಪೂಜೆ, 11ಗಂಟೆಗೆ ಗಂಗಾ ಸ್ನಾನ ನಡೆಯಲಿದೆ. ಬಳಿಕ ಕಾವೇರಿ ನದಿಯಿಂದ ಶ್ರೀ ಬಸವೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12.30 ಗಂಟೆಗೆ ಮಹಾಪೂಜೆ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 3.30 ಗಂಟೆಗೆ ದೇವರ ಮನೆ ಮೆರವಣಿಗೆ ಹಾಗೂ ಸಂಜೆ 7 ಗಂಟೆಗೆ ಪೂಜೆ ನಡೆಯಲಿದೆ.
ಮಾ.31ರಂದು ಮಂಗಳವಾರ ಬೆಳಗ್ಗೆ 8ಗಂಟೆಗೆ ರುದ್ರಪಾರಾಯಣ, 10 ಗಂಟೆಗೆ ದೇವತಾ ಪ್ರಾರ್ಥನೆ, ಗಂಗಾ ಪೂಜೆ ಮತ್ತು ಗಂಗಾ ಸ್ನಾನ ನಡೆಯಲಿದೆ. ನಂತರ ಶ್ರೀ ಬಸವೇಶ್ವರ ದೇವರ ಪಲ್ಲಕ್ಕಿ ಮೆರವಣಿಗೆ, ಕೊಂಡ ಸೇವೆ, ಮಹಾಪೂಜೆ, ಹರಕ್ಕೆ ಒಪ್ಪಿಸುವುದು, ತೀರ್ಥ ಪ್ರಸಾದ, ಅನ್ನಸಂತರ್ಪಣೆ ಹಾಗೂ ಮಂತ್ರಾಕ್ಷತೆ ಕಾರ್ಯಕ್ರಮಗಳು ಜರುಗಲಿವೆ.
ಈ ಮೂರು ದಿನಗಳ ವಾರ್ಷಿಕೋತ್ಸವದಲ್ಲಿ ನಾಡಿನ ಸಮಸ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ಆಯೋಜಕರು ವಿನಂತಿಸಿಕೊಂಡಿದ್ದಾರೆ
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net