ರೈತರಿಗೆ ಬರ ಪರಿಹಾರ ಘೋಷಣೆ ಮಾಡಿ

ಪ್ರತಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್
ಪ್ರತಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್
Published on
ಬೆಂಗಳೂರು: ರಾಜ್ಯವನ್ನು ಬರಪೀಡಿತ ಎಂದು ಘೋಷಿಸಿ, ರೈತರಿಗೆ ಎಕರೆಗೆ ತಲಾ 50 ಸಾವಿರ ರೂ. ಪರಿಹಾರ ನೀಡಬೇಕೆಂದು ವಿಧಾನ ಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಆಗ್ರಹಿಸಿದರು.
ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರೈತರ ಕಣ್ಣೀರಿನ ಕಥೆಗಳನ್ನು ಕೇಳಿದರೆ ಕಾಂಗ್ರೆಸ್ ಸರ್ಕಾರ ರೈತರ ಬಗ್ಗೆ ಹೊಂದಿರುವ ಧೋರಣೆ ಬಗ್ಗೆ ತಿಳಿಯಲಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ರೈತರ ಸಂಕಷ್ಟದ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಪಕ್ಷದ ಆಂತರಿಕ ರಾಜಕಾರಣ, ಸಂಪುಟ ವಿಸ್ತರಣೆ ಹಾಗೂ ಖಾತೆ ಹಂಚಿಕೆಯಲ್ಲೇ ಮುಖ್ಯಮಂತ್ರಿ ಮುಳುಗಿದ್ದಾರೆ.
ಮಳೆ ಕೊರತೆಯಿಂದ ಜಲಾಶಯಗಳ ನೀರಿನ ಮಟ್ಟ ಕುಸಿಯುತ್ತಿದೆ. ಕೃಷಿ ಉತ್ಪಾದನೆ ನಿರೀಕ್ಷಿತ ಮಟ್ಟದಲ್ಲಿಲ್ಲ. ರೈತರು ಸಂಕಷ್ಟದಲ್ಲಿದ್ದು, ಆತ್ಮಹತ್ಯೆಯ ಅಂಚಿಗೆ ತಲುಪಿದ್ದಾರೆ. ಜಾನುವಾರುಗಳಿಗೆ ಮೇವು ಮತ್ತು ಕುಡಿಯುವ ನೀರಿನ ಕೊರತೆ ಎದುರಾಗಿದೆ. ಅನೇಕ ರೈತರು ಬೇರೆ ರಾಜ್ಯಗಳಿಗೆ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರವಿಕುಮಾರ್ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net