ಧಾರವಾಡ: ಕೆಎಎಸ್ ಅಧಿಕಾರಿ ಅನುರಾಧಾ ವಸ್ತ್ರದ ಅವರು ಹುಬ್ಬಳ್ಳಿ& ಧಾರವಾಡ ಮಹಾನಗರ ಪಾಲಿಕೆಯ ಆಡಳಿತ ವಿಭಾಗದ ಉಪ ಆಯುಕ್ತರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಬೆಳಗಾವಿಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿಶೇಷ ಭೂಸ್ವಾಧಿನ ಅಧಿಕಾರಿಯಾಗಿ, ಖಾನಾಪುರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಸಚಿವರಾಗಿ, ಹು& ಧಾ ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧಿನ ಅಧಿಕಾರಿಯಾಗಿ, ವಿಜಯಪುರ ಜಿಲ್ಲೆ ಇಂಡಿ ಉಪ ವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ನಿಕಟಪೂರ್ವ ಇಂಡಿಯ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಶೇಷ ಭೂಸ್ವಾಧಿನ ಅಧಿಕಾರಿಯಾಗಿದ್ದರು.