ಬಿಆರ್​ಟಿಎಸ್​ ಅವ್ಯವಸ್ಥೆ ಸರಿಪಡಿಸಲು ಮನವಿ BRTS

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ಮನವಿ.
ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ಮನವಿ.
Published on
ಧಾರವಾಡ: ಹುಬ್ಬಳ್ಳಿ- ಧಾರವಾಡ ಅವಳಿನಗರ ನಡುವಿನ ಬಿಆರ್​ಟಿಎಸ್​ ಅವ್ಯವಸ್ಥೆಯನ್ನು ಸರಿಪಡಿಸುವಂತೆ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ಧಾರವಾಡ ಧ್ವನಿ ಅಧ್ಯಕ್ಷ ಈಶ್ವರ ಶಿವಳ್ಳಿ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಗುರುವಾರ ಮನವಿ ಸಲ್ಲಿಸಲಾಯಿತು.
ಬಿಆರ್​ಟಿಎಸ್​ ಚಿಗರಿ ಬಸ್​ಗಳ ಸಂಚಾರಕ್ಕೆ ಪ್ರತ್ಯೇಕ ಕಾರಿಡಾರ್​ ಇದೆ. ಅದೇರೀತಿ ಸಾರ್ವಜನಿಕರ ವಾಹನ ಸಂಚಾರಕ್ಕೆ ಪಕ್ಕದಲ್ಲಿ ರಸ್ತೆ ವ್ಯವಸ್ಥೆ ಇದೆ. ಆದರೆ, ಈಗ ಸಾರ್ವಜನಿಕರು ಸಂಚರಿಸುವ ಮಾರ್ಗದಲ್ಲಿ ವಾಹನಗಳ ದಟ್ಟಣೆ ಅಧಿಕವಾಗಿದೆ. ಸಾರ್ವಜನಿಕರು ತ್ವರಿತವಾಗಿ ಹುಬ್ಬಳ್ಳಿ- ಧಾರವಾಡ ಮಧ್ಯೆ ಸಂಚರಿಸಲು ಕಷ್ಟವಾಗುತ್ತಿದೆ. ಆದ್ದರಿಂದ ಧಾರವಾಡದ ಜ್ಯುಬಿಲಿ ವೃತ್ತದಿಂದ ನವಲೂರ ಸೇತುವೆವರೆಗೆ ಹಾಗೂ ಹುಬ್ಬಳ್ಳಿ ಉಣಕಲ್​ದಿಂದ ಹೊಸೂರು ವೃತ್ತದವರೆಗೆ ಬಿಆರ್​ಟಿಎಸ್​ ಕಾರಿಡಾರ್​ನಲ್ಲಿ ಎಲ್ಲ ಸಾರ್ವಜನಿಕ ವಾಹನಗಳಿಗೆ  ಸಂಚರಿಸಲು ಅನುವು ಮಾಡಿಕೊಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net