ಒಕ್ಕಲಿಗರ ಸಂದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ

Application for the Pratibha Award from the Vokkaligara Sanm
Application for the Pratibha Award from the Vokkaligara Sanm
Published on
ತಿಪಟೂರು: ನಗರದ ಹೌಸಿಂಗ್​ ಬೋರ್ಡ್​ನಲ್ಲಿರುವ ಒಕ್ಕಲಿಗರ ಭವನದಲ್ಲಿ ತಾಲೂಕು ಒಕ್ಕಲಿಗರ ಸಂಘದಿಂದ ಶ್ರೀ ಕ್ಷೇತ್ರ ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರಸಾನ್ನಿಧ್ಯದಲ್ಲಿ ತಾಲೂಕಿನ ಒಕ್ಕಲಿಗ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ಎನ್​. ಚಿದಾನಂದ್​ ತಿಳಿಸಿದರು.
ಸಂದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಗ್ರಾಮಾಂತರ ವಿದ್ಯಾರ್ಥಿಗಳಿಗೆ ಶೇ.75 ಮತ್ತು ತಿಪಟೂರು ನಗರ ವಿದ್ಯಾರ್ಥಿಗಳಿಗೆ ಶೇ.85 ಹಾಗೂ ತಿಪಟೂರೇತರ ಶಾಲಾ& ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿದ ತಾಲೂಕಿನ ವಿದ್ಯಾರ್ಥಿಗಳಿಗೆ ಶೇ.85ಮತ್ತು ಎಲ್ಲ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಜೂ.15ರೊಳಗೆ ನಗರದ ಹೌಸಿಂಗ್​ ಬೋರ್ಡ್​ನಲ್ಲಿರುವ ಒಕ್ಕಲಿಗ ಸಂಘದ ಕಚೇರಿಯಲ್ಲಿ ಅರ್ಜಿ ಪಡೆದು ಸಲ್ಲಿಸಬಹುದಾಗಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net