5 ಸಾವಿರ ರೂ. ವಿದ್ಯಾರ್ಥಿ ವೇತನಕ್ಕೆ ಅರ್ಜಿ ಅಹ್ವಾನ

ವಿಭೂತಿಪುರ ಶ್ರೀಗಳ ಜನ್ಮ ಸುವರ್ಣ ಮಹೋತ್ಸವಕ್ಕೆ 50 ವಿದ್ಯಾರ್ಥಿಗಳ ಆಯ್ಕೆ
A scheme to provide a scholarship of ₹5,000 each to 50 poor, meritorious students, on the occasion of the golden jubilee of Dr. Mahantalinga Shivacharya Swamiji’s birth.
ಡಾ. ಮಹಾಂತಲಿಂಗ ಶಿವಾಚಾರ್ಯ ಸ್ವಾಮಿಗಳ ಜನ್ಮ ಸುವರ್ಣ ಮಹೋತ್ಸವದ ನಿಮಿತ್ತ 50 ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ 5 ಸಾವಿರ ವಿದ್ಯಾರ್ಥಿ ವೇತನ ನೀಡುವ ಯೋಜನೆ
Published on: 

ಬೆಂಗಳೂರು : ವಿಭೂತಿಪುರ ಮಠದ ಡಾ. ಮಹಾಂತಲಿಂಗ ಶಿವಾಚಾರ್ಯ ಸ್ವಾಮಿಗಳ ಪಟ್ಟಾಧಿಕಾರದ 30ನೇ ವರ್ಧಂತಿ ಮಹೋತ್ಸವ ಮತ್ತು ಜನ್ಮ ಸುವರ್ಣ ಮಹೋತ್ಸವ ಪ್ರಯುಕ್ತ ಡಿ.3ರಿಂದ 7ರವರೆಗೆ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕಳೆದ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.90 ಪಡೆದ ಬಿಪಿಎಲ್ ಕುಟುಂಬದ 50 ಬಡ ಪ್ರತಿಭಾನ್ವಿತ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ತಲಾ 5 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲು ತೀರ್ಮಾನಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ತಮ್ಮ ಆಧಾರ ಕಾರ್ಡ್, ಬಿಪಿಎಲ್ ಕಾರ್ಡ್, ಅಟೆಸ್ಟೆಡ್ ಮಾರ್ಕ್ಸ್ ಕಾರ್ಡ್ ಪ್ರತಿಯೊಂದಿಗೆ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಡಿ.3 ರಂದು ಸಂಜೆ 5.30ಕ್ಕೆ ನಡೆಯುವ ಸಮಾರಂಭದಲ್ಲಿ ವಿದ್ಯಾರ್ಥಿಗಳೇ ಖುದ್ದು ಹಾಜರಾಗಿ ದಾಖಲಾತಿಗಳನ್ನು ಸಲ್ಲಿಸಿ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗೆ ದೂ: 9480339950 ಸಂಪರ್ಕಿಸಬಹುದು.