ಡಿ.ಇಡಿ, ಡಿಪಿ.ಇಡಿ ಕೋರ್ಸ್‌ಗೆ ಅರ್ಜಿ ಆಹ್ವಾನ

ಡಿ.ಇಡಿ, ಡಿಪಿ.ಇಡಿ ಕೋರ್ಸ್‌ಗೆ ಅರ್ಜಿ ಆಹ್ವಾನ
ಡಿ.ಇಡಿ, ಡಿಪಿ.ಇಡಿ ಕೋರ್ಸ್‌ಗೆ ಅರ್ಜಿ ಆಹ್ವಾನ
Published on

ಪ್ರಮುಖ ಮುಖ್ಯಾಂಶಗಳು

  • ಅನುದಾನಿತ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‌ಲೈನ್ ಮೂಲಕ ಅರ್ಜಿ
  • ಆಫ್‌ಲೈನ್ ಮೂಲಕ ಅರ್ಜಿಗಳನ್ನು ಮೇ 6ರಿಂದ ಜೂ.1ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
  • ಅರ್ಜಿಯನ್ನು ಭರ್ತಿ ಮಾಡಿ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕ ಕೇಂದ್ರಗಳಲ್ಲಿ ಸಲ್ಲಿಸುವಂತೆ ಸೂಚನೆ
ಬೆಂಗಳೂರು: 2026-27ನೇ ಸಾಲಿನ ಡಿ.ಇಡಿ, ಡಿಪಿಇಡಿ ಮತ್ತು ಡಿಪಿಎಸ್‌ಇ ಕೋರ್ಸ್‌ಗಳ ವ್ಯಾಸಂಗಕ್ಕಾಗಿ ರಾಜ್ಯದ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಹಾಗೂ ಖಾಸಗಿ ಸಂಸ್ಥೆಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಮೇ 6ರಿಂದ ಜೂ.1ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಶಾಲಾ ಶಿಕ್ಷಣ ಇಲಾಖೆಯು ವೆಬ್‌ಸೈಟ್ www.schooleducation.karnataka.gov.in
ನಲ್ಲಿ  ಪ್ರಕಟಿಸಲಾದ ಅಧಿಸೂಚನೆಯಲ್ಲಿ ಅರ್ಹತೆ, ಮೀಸಲಾತಿ, ಶುಲ್ಕದ ವಿವರಗಳು ಹಾಗೂ ಜಿಲ್ಲಾವಾರು ಶಿಕ್ಷಣ ಸಂಸ್ಥೆಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಅರ್ಥೈಸಿಕೊಂಡು ಕ್ರಮಬದ್ಧವಾಗಿ ಅರ್ಜಿಯನ್ನು ಭರ್ತಿ ಮಾಡಿ ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕ ಕೇಂದ್ರಗಳಲ್ಲಿ ಸಲ್ಲಿಸುವಂತೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net