

ಬೆಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯದಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಪತ್ರಿಕೋದ್ಯಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದ ಮಹಿಳಾ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್‌ಗೆ ಅವಕಾಶ ಕಲ್ಪಿಸಿದೆ.
ಈ ಕುರಿತು ತಿಳಿಸಿರುವ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಅಯೇಶಾ ಖಾನಂ, ಬರವಣಿಗೆಯಲ್ಲಿ ಪರಿಣತಿ ಮತ್ತು ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ 2022-23, 2023-24, 2024-25 ಹಾಗೂ 2025-26ನೇ ಶೈಕ್ಷಣಿಕ ವರ್ಷದಲ್ಲಿ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಒಟ್ಟು 20 ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಿಂಗಳ ಇಂಟರ್ನ್‌ಶಿಪ್ ಹಾಗೂ ಅಕಾಡೆಮಿಯಿಂದ ತರಬೇತಿ ಭತ್ಯೆ ನೀಡಲಾಗುವುದು. ಅಭ್ಯರ್ಥಿಗಳು ತಮ್ಮ ಸ್ವವಿವರದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://docs.google.com/forms/d/e/1FAIpQLSfYwla-tbEhbvzUmRvWdsOCn44knMZ7orPgzExhxJsmUxIxlQ/viewform ನಲ್ಲಿ ಸಲ್ಲಿಸಬೇಕು. ಅಭ್ಯರ್ಥಿಗಳನ್ನು ಅಕಾಡೆಮಿಯ ಸಮಿತಿ ಆಯ್ಕೆ ಮಾಡಲಿದೆ. ಅರ್ಜಿ ಸಲ್ಲಿಸಲು ಅ.23 ಕೊನೇ ದಿನವಾಗಿದೆ.