ಬೆಂ.ನಗರ ವಿವಿ ಘಟಿಕೋತ್ಸವಕ್ಕೆ ಅರ್ಜಿ ಆಹ್ವಾನ

ಬೆಂಗಳೂರು ನಗರ ವಿಶ್ವವಿದ್ಯಾನಿಲಯ
ಬೆಂಗಳೂರು ನಗರ ವಿಶ್ವವಿದ್ಯಾನಿಲಯ
Published on

ಪ್ರಮುಖ ಮುಖ್ಯಾಂಶಗಳು

  • ವಿಶ್ವವಿದ್ಯಾನಿಲಯದ ವಿವಿಧ ವಿಭಾಗ, ಸಂಯೋಜಿತ ಮತ್ತು ಸ್ವಾಯುತ್ತ ಕಾಲೇಜುಗಳಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
  • 2025 ಡಿಸೆಂಬರ್ ಅಂತ್ಯದೊಳಗೆ ಎಲ್ಲ ಸೆಮಿಸ್ಟರ್‌ಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನ
  • ದಂಡ ಶುಲ್ಕವಿಲ್ಲದೆ ಸಲ್ಲಿಸಲು ಮಾ.9 ಹಾಗೂ 100 ರೂ.ಗಳ ದಂಡ ಶುಲ್ಕದೊಂದಿಗೆ ಸಲ್ಲಿಸಲು ಮಾ.13 ಕೊನೆಯ ದಿನವಾಗಿದೆ
ಬೆಂಗಳೂರು: ಡಾ. ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ನಾಲ್ಕನೇ ಘಟಿಕೋತ್ಸವವನ್ನು ಏಪ್ರಿಲ್ ತಿಂಗಳ ಮೊದಲ ಅಥವಾ ಎರಡನೆಯ ವಾರದಲ್ಲಿ ಏರ್ಪಡಿಸಲು ಉದ್ದೇಶಿಸಲಾಗಿದೆ.
ವಿಶ್ವವಿದ್ಯಾನಿಲಯದ ವಿವಿಧ ವಿಭಾಗಗಳಲ್ಲಿ ಹಾಗೂ ಸಂಯೋಜಿತ ಮತ್ತು ಸ್ವಾಯುತ್ತ ಕಾಲೇಜುಗಳಲ್ಲಿ ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡಿ 2025 ಡಿಸೆಂಬರ್ ಅಂತ್ಯದೊಳಗೆ ಎಲ್ಲ ಸೆಮಿಸ್ಟರ್‌ಗಳಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳಿಂದ ಘಟಿಕೋತ್ಸವದಲ್ಲಿ ಪದವಿ ಪ್ರಮಾಣಪತ್ರ ಪಡೆಯಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಅದರ ಮುದ್ರಿತ ಪ್ರತಿಯನ್ನು ಆಯಾ ವಿಭಾಗಗಳ ಮುಖ್ಯಸ್ಥರು/ ಕಾಲೇಜುಗಳ ಪ್ರಿನ್ಸಿಪಾಲರಿಗೆ ಸಲ್ಲಿಸಲು ಸೂಚಿಸಲಾಗಿದೆ.
ಪೂರ್ಣಗೊಳಿಸಿದ ಅರ್ಜಿಗಳನ್ನು ವಿಭಾಗ ಮುಖ್ಯಸ್ಥರು/ಕಾಲೇಜುಗಳಿಗೆ ದಂಡ ಶುಲ್ಕವಿಲ್ಲದೆ ಸಲ್ಲಿಸಲು ಮಾ.9 ಹಾಗೂ 100 ರೂ.ಗಳ ದಂಡ ಶುಲ್ಕದೊಂದಿಗೆ ಸಲ್ಲಿಸಲು ಮಾ.13 ಕೊನೆಯ ದಿನವಾಗಿದೆ ಎಂದು ಬಿಸಿಯು ಮೌಲ್ಯಮಾಪನ ಕುಲಸಚಿವ ಪ್ರೊ. ರಮೇಶ ಬಿ. ಕುಡೇನಟ್ಟಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net