ಪ್ರತಿಭಾ ಪುರಸ್ಕಾರ ನೀಡಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Prathibha Puraskara
Prathibha Puraskara
Published on
ಕೆ.ಆರ್.ಪೇಟೆ: ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಮಲ್ಲಿಕಾರ್ಜುನ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲು ತೀರ್ಮಾನಿಸಲಾಗಿದ್ದು, ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಟ್ರಸ್ಟಿ ಗಂಜಿಗೆರೆ ಮಹೇಶ್ ತಿಳಿಸಿದರು.
ಅರ್ಜಿ ಸಲ್ಲಿಸಿ ಹೆಸರು ನೋಂದಾಯಿಸಿಕೊಳ್ಳಲು ಮೇ 16ರತನಕ ಅವಕಾಶ ಕಲ್ಪಿಸಲಾಗಿದ್ದು, ತಾಲೂಕಿನ ಪ್ರತಿಭಾವಂತ ಅರ್ಹ ವಿದ್ಯಾರ್ಥಿಗಳು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಸ್ಟೇಟ್ ಸಿಲಬಸ್ (ರಾಜ್ಯ ಪಠ್ಯಕ್ರಮ) ಪರೀಕ್ಷೆಯಲ್ಲಿ ಶೇ.95 ಅಂಕಗಳು, ಎಸ್‌ಎಸ್‌ಎಲ್‌ಸಿ ಸಿಬಿಎಸ್‌ಸಿ (ಕೇಂದ್ರೀಯ ಪಠ್ಯಕ್ರಮ) ಪರೀಕ್ಷೆಯಲ್ಲಿ ಶೇ.85 ಅಂಕಗಳು ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಐಸಿಐಸಿ ಶೇ.85ರಷ್ಟು ಅಂಕಗಳನ್ನು ಪಡೆದಿರುವ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ 2025-26ನೇ ಸಾಲಿನಲ್ಲಿ (ವಿಜ್ಞಾನ, ವಾಣಿಜ್ಯ ಹಾಗೂ ಕಲಾ ವಿಭಾಗ) ಶೇ.90ರಷ್ಟು ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ನೀಡಿ ಗೌರವಿಸಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ತಾಲೂಕಿನ ಸರ್ಕಾರಿ ಹಾಗೂ ಅನುಧಾನಿತ ಪ್ರೌಢಶಾಲೆಗಳಲ್ಲಿ ಶಾಲಾ ಹಂತದಲ್ಲಿ ಮತ್ತು ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜಿನ ಕಾಲೇಜು ಹಂತದಲ್ಲಿ ಅತಿ ಹೆಚ್ಚು ಅಂಕ ಪಡೆದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಪ್ರತಿಭಾ ಪುರಸ್ಕಾರ ಸಮಾರಂಭದ ಸಾನ್ನಿಧ್ಯವನ್ನು ತುಮಕೂರಿನ ಸಿದ್ದಗಂಗಾ ಮಠದ ಪೀಠಾಧ್ಯಕ್ಷ ಶ್ರೀ ಸಿದ್ದಲಿಂಗ ಸ್ವಾಮೀಜಿ ವಹಿಸಲಿದ್ದಾರೆ. ವಿವಿಧ ಮಠಗಳ
ಸ್ವಾಮೀಜಿ ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಸುಜೇಂದ್ರಕುಮಾರ್, ಜಿಲ್ಲಾ ಜನಜಾಗೃತಿ ಉಪಾಧ್ಯಕ್ಷೆ ನಳಿನಿ, ಉದಯ ರವಿ ಟ್ರಸ್ಟ್ ಅಧ್ಯಕ್ಷ ಸೋಮಶೇಖರ್, ಸಾಮಾಜಿಕ ಹೋರಾಟಗಾರ ಸಾಯಿ ಸುಮಿತ್, ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ, ಮಾಜಿ ಅಧ್ಯಕ್ಷ ಕೆ.ಆರ್.ನೀಲಕಂಠ, ಹಿರಿಯ ಪತ್ರಕರ್ತ ಹರಿಚರಣ ತಿಲಕ್, ಪ್ರೊ.ಚಾ.ಶಿ.ಜಯಕುಮಾರ್, ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷ ಟಿ.ವೈ.ಆನಂದ್, ಶಿಕ್ಷಕ ಸಣ್ಣೇಗೌಡ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net