ಗ್ರಾಮೀಣ ಪ್ರದೇಶಗಳಲ್ಲಿ ರೈತರು ವಾಸಿಸುವ ಮನೆ, ತೋಟದ ಮನೆ, ಕೃಷಿ ಉಪಕರಣಗಳನ್ನು ಇಡುವ ಮನೆ, ದನದ ಕೊಟ್ಟಿಗೆ, ರೇಷ್ಮೆ ಗೂಡಿನ ಮನೆ ಇವುಗಳಿಗೆ ವಿದ್ಯುತ್ ಸಂಪರ್ಕಕ್ಕಾಗಿ ಸ್ವಾಧೀನ ಅನುಭವನ ಪ್ರಮಾಣಪತ್ರ ಪಡೆಯುವುದರಿಂದ ವಿನಾಯಿತಿ ನೀಡಲಾಗಿದೆ. ವಿದ್ಯುತ್ ಸರಬರಾಜು ಕಂಪನಿಗಳು ವಿದ್ಯುತ್ ಸಂಪರ್ಕ ನೀಡಲು ಅನುಸರಿಸಬೇಕಾದ ಸಾಮಾನ್ಯ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗುತ್ತದೆ ಎಂದು ಇಂಧನ ಇಲಾಖೆ ಸ್ಪಷ್ಟಪಡಿಸಿದೆ.