ದಕ್ಷ ಅಧಿಕಾರಿ ನೇಮಿಸಿ

ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಎನ್‌ಡಿಎ ನಿಯೋಗ
ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಎನ್‌ಡಿಎ ನಿಯೋಗ
Published on
ಬೆಂಗಳೂರು : ಕರ್ನಾಟಕದಲ್ಲಿ ಎಸ್‌ಐಆರ್ ಮೂಲ ಆಶಯವನ್ನೇ ಕಾಂಗ್ರೆಸ್ ಸರ್ಕಾರ ದಾರಿತಪ್ಪಿಸಲು ಹೊರಟಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದರು.
ಕೇಂದ್ರ ಚುನಾವಣಾ ಆಯೋಗ ರೂಪಿಸಿರುವ ಮಾರ್ಗಸೂಚಿಯನ್ನು ಸರ್ಕಾರ ಸಂಪೂರ್ಣವಾಗಿ ಗಾಳಿಗೆ ತೂರಿದೆ. ಅಕ್ರಮ ಮತಗಳನ್ನು ಉಳಿಸಿಕೊಂಡು ಚುನಾವಣೆಯಲ್ಲಿ ಲಾಭ ಮಾಡಿಕೊಳ್ಳಲು ರಾಜ್ಯದ ಆಡಳಿತ ಯಂತ್ರವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದರು.
ಛತ್ರಗಳು, ಕಲ್ಯಾಣ ಮಂಟಪಗಳು ಮಸೀದಿಗಳು ಸಮುದಾಯ ಭವನಗಳು ಸೇರಿ ಬೇಕಾದ ಕಡೆಗಳಲ್ಲಿ ಗುಂಪು ಗುಂಪಾಗಿ ಜನರನ್ನು ಸೇರಿಸಿ ತನಗೆ ಬೇಕಾದ ರೀತಿಯಲ್ಲಿ ಪಟ್ಟಿ ಪರಿಷ್ಕರಣೆ ಮಾಡಿಕೊಳ್ಳುವ ದುಷ್ಕೃತ್ಯವನ್ನು ಸರ್ಕಾರ ಎಸಗುತ್ತಿದೆ. ಕೆಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಪರಿಷ್ಕರಣೆಗೆ ನಿಯೋಜಿಸಲ್ಪಟ್ಟ ಅಧಿಕಾರಿಗಳು ಸರ್ಕಾರದ ಕುಮ್ಮಕ್ಕಿಗೆ ಒಳಗಾಗಿ ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ. ಮಾಧ್ಯಮಗಳಲ್ಲಿ ನಿರಂತರವಾಗಿ ವರದಿಗಳು ಪ್ರಸಾರವಾಗಿವೆ.
ವಿದ್ಯುನ್ಮಾನ ಮಾಧ್ಯಮಗಳಲ್ಲಿ ದೃಶ್ಯಗಳ ಸಮೇತ ಎಸ್‌ಐಆರ್ ಜಾತ್ರೆಯ ದೃಶ್ಯಗಳು ಪ್ರಸಾರವಾಗಿವೆ. ಜಾಲತಾಣಗಳಲ್ಲೂ ಈ ದೃಶ್ಯಗಳು ಹರಡಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net