ಶ್ರೀ ವೈದ್ಯರನ್ನು ನೇಮಕ ಮಾಡಿ Doctor

ಶ್ರೀ ವೈದ್ಯರನ್ನು ನೇಮಕ ಮಾಡಿ Doctor
ಶ್ರೀ ವೈದ್ಯರನ್ನು ನೇಮಕ ಮಾಡಿ Doctor
Published on
ಕೆಜಿಎಫ್​: ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಅಗತ್ಯವಾಗಿ ಕ್ಯಾಸ್ಯುಯಾಲಿಟಿ ಮತ್ತು ತುರ್ತು ಚಿಕಿತ್ಸಾ ಘಟಕ ಕೂಡಲೇ ಕಾರ್ಯಾರಂಭ ಆಗಬೇಕು. ಕೊರತೆಯಿರುವ ವೈದ್ಯರನ್ನು ಆದಷ್ಟು ಬೇಗ ನೇಮಕ ಮಾಡಬೇಕು ಎಂದು ಶಾಸಕಿ ರೂಪಕಲಾ ತಿಳಿಸಿದರು.Doctor
ನಗರದ ಸಾರ್ವಜನಿಕ ಆಸ್ಪತ್ರೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಡಾ.ರಜನಿ, ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿದ ಅವರು, ಆಸ್ಪತ್ರೆಗೆ ಇಂರ್ಟನ್​ಶಿಪ್​ಗೆಂದು ಬರುವ ಪಿಜಿ ವಿದ್ಯಾರ್ಥಿಗಳಿಗೆ, ನರ್ಸಿಂಗ್​ ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲ ಸೌಕರ್ಯ ಕಲ್ಪಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ನಿಯೋಜಿಸಿದಲ್ಲಿ ದಿನದ 24 ಗಂಟೆ ರೋಗಿಗಳಿಗೆ ಚಿಕಿತ್ಸೆ ದೊರೆಯುತ್ತದೆ ಎಂದು ಹೇಳಿದರು.
ಸಾರ್ವಜನಿಕ ಆಸ್ಪತ್ರೆ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಕೆಜಿಎಫ್​ ನಗರ ಹಾಗೂ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರು ಅವಲಂಭಿಸಿದ್ದು, ಪ್ರತಿನಿತ್ಯ ಇಲ್ಲಿಗೆ ಚಿಕಿತ್ಸೆಗೆಂದು ಬರುತ್ತಾರೆ. ಆದರೆ ರೋಗಿಗಳ ಸಂಖ್ಯೆಗೆ ತಕ್ಕಂತೆ ಆಧುನಿಕ ಸೌಲಭ್ಯಗಳಿಲ್ಲ. ವೈದ್ಯರ ಹುದ್ದೆ ಖಾಲಿ ಇರುವುದಾಗಿ ಗಮನಕ್ಕೆ ಬಂದಿದ್ದು, ಶ್ರೀ ವೈದ್ಯರನ್ನು ಭರ್ತಿ ಮಾಡಿ ಎಂದು ಹೇಳಿದರು.
ಮುಖ್ಯಮಂತ್ರಿ ಅವರ ವಿಶೇಷ ಅನುದಾನದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಡಾ.ರಜನಿ ಮಾತನಾಡಿ, ಸಾರ್ವಜನಿಕ ಆಸ್ಪತ್ರೆಯನ್ನು ಆಧುನೀಕರಿಸುವ ಕುರಿತು ಹಾಗೂ ಮೇಲ್ದರ್ಜೆಗೇರಿಸುವ ಬಗ್ಗೆ ಶಾಸಕಿ ರೂಪಕಲಾ ಅವರು ಹಲವಾರು ಬಾರಿ ಸದನದಲ್ಲಿ ಸರ್ಕಾರದ ಹಾಗೂ ಆರೋಗ್ಯ ಇಲಾಖೆ ಸಚಿವರ ಬಳಿ ಗಮನಕ್ಕೆ ತಂದಿದ್ದಾರೆ. ಸಾರ್ವಜನಿಕ ಆಸ್ಪತ್ರೆಯ ವಸ್ತು ಸ್ಥಿತಿ ತಿಳಿಯಲು ಉನ್ನತ ಮಟ್ಟದ ತಂಡ ನಿಯೋಜಿಸಿ ಪರಿಶೀಲನೆಗೆ ಬಂದಿದ್ದೇವೆ ಎಂದು ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net