ನೀರು, ವಾಯು ಮಾಲಿನ್ಯ ತಡೆ ಮತ್ತು ನಿಯಂತ್ರಣ ಕಾಯ್ದೆ 1981ರ ಸೆಕ್ಷನ್ 5ರಲ್ಲಿ ಮಂಡಳಿ ಅಧ್ಯಕ್ಷರಿಗೆ ಪರಿಸರ ಸಂರಕ್ಷಣೆ ಕುರಿತ ವಿಶೇಷ ಜ್ಞಾನ ಅಥವಾ ಪ್ರಾಯೋಗಿಕ ಅನುಭವ ಇರಬೇಕೆಂಬ ಅಂಶವಿದೆ. ಪ್ರಕರಣವೊಂದರಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿನಲ್ಲಿ ರಾಜ್ಯಗಳು ಸೂಕ್ತ ಮಾರ್ಗಸೂಚಿ ಅಥವಾ ನೇಮಕಾತಿ ನಿಯಮ ರೂಪಿಸಿ ಸೂಕ್ತ ವೃತ್ತಿಪರರು ಮತ್ತು ತಜ್ಞರನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗಳಿಗೆ ನೇಮಕ ಮಾಡುವಂತೆ ನಿರ್ದೇಶಿಸಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ 2020ರ ಜೂ.19ರಂದು ಕರ್ನಾಟಕ ಸರ್ಕಾರ ಮಾರ್ಗಸೂಚಿ ರೂಪಿಸಿದೆ. ಹಾಗಾಗಿ, ಕೆಎಸ್‌ಪಿಸಿಬಿ ಅಧ್ಯಕ್ಷ ಸ್ಥಾನಕ್ಕೆ ಅರ್ಹತೆ ಇರುವವರನ್ನೇ ನೇಮಕ ಮಾಡಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.