ಕಿದ್ವಾಯಿಗೆ ಪ್ರಭಾರ ನಿರ್ದೇಶಕರ ನೇಮಕ

Kidwai incharge director Dr R. Krishanappa
Kidwai incharge director Dr R. Krishanappa
Published on
ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ಡಾ.ಆರ್. ಕೃಷ್ಣಪ್ಪ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಆರ್.ಕೃಷ್ಣಪ್ಪ ಕಳೆದ 22 ವರ್ಷಗಳಿಂದ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ತಲೆ ಮತ್ತು ಕುತ್ತಿಗೆ ಗಂಥಿ ಶಾಸ್ತ್ರ ವಿಭಾಗದ ಮುಖ್ಯಸ್ಥ ಹಾಗೂ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಸರ್ಕಾರ ಮುಂದಿನ ಆದೇಶದವರೆಗೆ ಸಂಸ್ಥೆಯ ಪ್ರಭಾರ ನಿರ್ದೇಶಕರಾಗಿ ನೇಮಿಸಿದ್ದು, ಸೋಮವಾರ ಅಧಿಕಾರ ವಹಿಸಿಕೊಂಡರು. ಸಂಸ್ಥೆಯ ಹಾಲಿ ನಿರ್ದೇಶಕರಾಗಿದ್ದ ಡಾ.ಟಿ. ನವೀನ್ ಅವರನ್ನು ವೈದ್ಯಕೀಯ ಅಧೀಕ್ಷಕರ ಹುದ್ದೆಯ ಪ್ರಭಾರದಲ್ಲಿ ಹಾಗೂ ರೇಡಿಯೇಷನ್ ಆಂಕಾಲಜಿ ವಿಭಾಗದ ಪ್ರಾಧ್ಯಾಪಕರ ಹುದ್ದೆಯಲ್ಲಿ ಮುಂದುವರಿಯಲು ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net