ಸಾರ್ವಜನಿಕರ ಅರ್ಜಿಗಳಿಗೆ ಸೂಕ್ತ ಪರಿಹಾರ

ಮಹಾಲಿಂಗಪುರ ಸಮೀಪದ ರನ್ನಬೆಳಗಲಿಯಲ್ಲಿ ತಾಲೂಕು ಆಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳ ವತಿಯಿಂದ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮವನ್ನು ಶಾಸಕ ಆರ್.ಬಿ. ತಿಮ್ಮಾಪೂರ ಉದ್ಘಾಟಿಸಿದರು. ಪಪಂ ಅಧ್ಯಕ್ಷೆ ರೂಪಾ ಹೊಸಟ್ಟಿ, ತಹಶೀಲ್ದಾರ್ ಚಿಕ್ಕಪ್ಪ ನಾಯಕ, ಈರಣ್ಣ ದಡ್ಡಿ, ಧರೆಪ್ಪ ಸಾಂಗಲಿಕರ, ಶಿವನಗೌಡ ಪಾಟೀಲ, ಸದುಗೌಡ ಪಾಟೀಲ ಇತರರಿದ್ದರು.ಮಹಾಲಿಂಗಪುರ ಸಮೀಪದ ರನ್ನಬೆಳಗಲಿಯಲ್ಲಿ ತಾಲೂಕು ಆಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳ ವತಿಯಿಂದ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮವನ್ನು ಶಾಸಕ ಆರ್.ಬಿ. ತಿಮ್ಮಾಪೂರ ಉದ್ಘಾಟಿಸಿದರು. ಪಪಂ ಅಧ್ಯಕ್ಷೆ ರೂಪಾ ಹೊಸಟ್ಟಿ, ತಹಶೀಲ್ದಾರ್ ಚಿಕ್ಕಪ್ಪ ನಾಯಕ, ಈರಣ್ಣ ದಡ್ಡಿ, ಧರೆಪ್ಪ ಸಾಂಗಲಿಕರ, ಶಿವನಗೌಡ ಪಾಟೀಲ, ಸದುಗೌಡ ಪಾಟೀಲ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಆರ್.ಬಿ. ತಿಮ್ಮಾಪೂರ ಅನಿಸಿಕೆ
  • ಪ್ರಜಾ ಸೇವಾ ಆಂದೋಲನ ಸೇವೆಗೆ ಚಾಲನೆ
ಮಹಾಲಿಂಗಪುರ: ಸರ್ಕಾರವೇ ಜನರ ಬಳಿಗೆ ತೆರಳಿ ಅವರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಪ್ರಜಾ ಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಆರ್.ಬಿ. ತಿಮ್ಮಾಪೂರ ಹೇಳಿದರು.
ಸಮೀಪದ ರನ್ನ ಬೆಳಗಲಿಯ ಬಂದಲಕ್ಷ್ಮೀದೇವಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳ ವತಿಯಿಂದ ಶನಿವಾರ ಆಯೋಜಿಸಿದ್ದ ಪ್ರಜಾ ಸೇವಾ ಆಂದೋಲನ-ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳು ಬಂದಿದ್ದು, ಅವುಗಳಿಗೆ ಸರ್ಕಾರದ ವತಿಯಿಂದ ಸೂಕ್ತ ಪರಿಹಾರ ಕಲ್ಪಿಸಲಾಗುವುದು. ಪರಮಾನಂದ ಗುಡಿಯಿಂದ ಕೋಡಿಹಾಳದವರೆಗೆ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ರನ್ನ ಬೆಳಗಲಿಯ ಬೈಪಾಸ್ ರಸ್ತೆ ನಿರ್ಮಾಣಕ್ಕೆ ರೂ.2 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.
ಮುಧೋಳ ತಹಶೀಲ್ದಾರ್ ಚಿಕ್ಕಪ್ಪ ನಾಯಕ ಮಾತನಾಡಿ, ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರವೇ ಜನರ ಮನೆ ಬಾಗಿಲಿಗೆ ತೆರಳಬೇಕು ಎಂಬ ಆಶಯದಂತೆ ಪ್ರಜಾ ಸೇವಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಜನಸೇವೆಗೆ ತಾಲೂಕಾಡಳಿತ ಸಮರ್ಪಿಸಿಕೊಂಡಿದೆ ಎಂದರು.
ಸಾರ್ವಜನಿಕರು ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಶಾಸಕ ಆರ್.ಬಿ. ತಿಮ್ಮಾಪೂರ ಅವರಿಗೆ ಮನವಿ ಸಲ್ಲಿಸಿದರು.
ಬೆಳಗಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೂಪಾ ಹೊಸಟ್ಟಿ, ಮುಧೋಳ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಮಾಚಕನೂರ, ಪಪಂ ಮುಖ್ಯಾಧಿಕಾರಿ ಈರಣ್ಣ ದಡ್ಡಿ, ಧರೆಪ್ಪ ಸಾಂಗಲಿಕರ, ಶಿವನಗೌಡ ಪಾಟೀಲ, ಸದುಗೌಡ ಪಾಟೀಲ, ಮುತ್ತಪ್ಪ ಸಣ್ಣಟ್ಟಿ, ಸಂಗಪ್ಪ ಅಮಾತಿ, ಯಮನಪ್ಪ ದೊಡಮನಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net