Arasu: A beacon of hope for the lives of the poor.
Published on:
Copied
Follow Us
ಗುಡಿಬಂಡೆ :
ಗಾಂಧೀಜಿ ಅವರ ತತ್ವ, ಸಿದ್ಧಾಂತ ಅಳವಡಿಸಿಕೊಂಡು ಸಮಾನತೆ ಹಿತದೃಷ್ಟಿಯಿಂದ ಅನೇಕ ಕಾರ್ಯಕ್ರಮ ರೂಪಿಸಿ ಬಡವರ ಬದುಕಿಗೆ ಮಾಜಿ ಸಿಎಂ ಡಿ.ದೇವರಾಜ ಅರಸು ಆಶಾಕಿರಣವಾಗಿದ್ದರು ಎಂದು ಕರುನಾಡು ಸಾಹಿತ್ಯ ಪರಿಷತ್ತಾಲೂಕು ಅಧ್ಯಕ್ಷೆ ಡಿ.ಎಲ್.ಪರಿಮಳ ಬಣ್ಣಿಸಿದರು.
ಪಟ್ಟಣದ ಹಿಂದುಳಿದ ವರ್ಗಗಳ ಇಲಾಖೆಯ ಡಿ.ದೇವರಾಜು ಅರಸು ಭವನದಲ್ಲಿ ಗುರುವಾರ ರಾಷ್ಟ್ರೀ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ದಿ.ಡಿ.ದೇವರಾಜ್ ಅರಸು 111ನೇ ಜನ್ಮದಿನಾಚರಣೆಯಲ್ಲಿ ಮಾತನಾಡಿದರು.
ಮುಖ್ಯಮಂತ್ರಿಯಾಗಿ ಅವರು ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಜಾರಿಗೊಳಿಸಿದರು. ಜೀತಪದ್ಧತಿ ರದ್ದುಗೊಳಿಸಿ ಲಕ್ಷಾಂತರ ಅಸಹಾಯಕರ ಪಾಲಿಗೆ ದೇವರು ಎನಿಸಿದವರು. ಭೂರಹಿತರಿಗೆ 7 ಲಕ್ಷ ಹೆಕ್ಟೇರ್ ಭೂ ಒಡೆತನ ನೀಡುವ ಮೂಲಕ ಇಂದಿಗೂ ಜನಮಾನಸದಲ್ಲಿ ಪ್ರಾತ@ ಸ್ಮರಣೀಯರಾಗಿದ್ದಾರೆ ಎಂದರು.
ಕೃಷಿಕ ಸಮಾಜದ ಅಧ್ಯಕ್ಷ ಮಂಜುನಾಥರೆಡ್ಡಿ ಮಾತನಾಡಿ, ಅರಸು ದಕ್ಷಿಣ ಭಾರತದಲ್ಲಿ ಹಿಂದುಳಿದ ವರ್ಗಗಳಿಗೆ ಭದ್ರ ಬುನಾದಿ ಹಾಕಿದ ನೇತಾರ. ಶಿಕ್ಷಣ, ಉದ್ಯೋಗದಲ್ಲಿ ಬಡವರಿಗೆ ಮೀಸಲಾತಿ ಒದಗಿಸಿದವರು. ಬಡತನ ರೇಖೆಗಿಂತ ಕೆಳಗಿನವರನ್ನು ಮುಖ್ಯವಾಹಿನಿಗೆ ತಂದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಸದೃಢಗೊಳಿಸುವ ಗುರಿ ಹೊಂದಿದ್ದರು. ಅಸಾಧ್ಯವಾದ ಸಾಧನೆಗಳನ್ನು ಮೌನವಾಗಿ ಮಾಡಿ ತೋರಿಸಿದ ಮೌನಕ್ರಾಂತಿಯ ಹರಿಕಾರ ಅವರು ಎಂದು ಹೇಳಿದರು.
ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮುನಿಕೃಷ್ಣ ಮಾತನಾಡಿ, ಸಮಾಜದಲ್ಲಿ ಶೋಷಣೆ ಹಾಗೂ ತುಳಿತಕ್ಕೆ ಒಳಗಾದವರು,ಬಡಜನರಿಗೆ ಉತ್ತಮ ಅವಕಾಶಗಳನ್ನು ಕಲ್ಪಿಸಿದರು. ರಾಜ್ಯದ ಹಿಂದುಳಿದ ವರ್ಗಗಳ, ದಲಿತರ, ಬಡವರ ಮನಸ್ಸಿನಲ್ಲಿ ಎಂದೆಂದಿಗೂ ಚಿರಸ್ಥಾಯಿಯಾಗಿದ್ದಾರೆ ಎಂದರು.
ಕಾರ್ಯಕ್ರಮ ಹಿನ್ನೆಲೆ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ, ಚಿತ್ರಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಸಾಪ ಅಧ್ಯಕ್ಷ ಬಿ.ಮಂಜುನಾಥ್, ಪಪಂ ಮಾಜಿ ಅಧ್ಯಕ್ಷ ರಿಯಾಜ್ಪಾಷ, ಸದಸ್ಯ ರಾಜೇಶ್, ನಾಮ ನಿರ್ದೇಶಿತ ಸದಸ್ಯ ಅಂಬರೀಶ್ ಇದ್ದರು.