2023ರ ಡಿ.4ರಂದು ಯಸಳೂರು ವಲಯದಲ್ಲಿ ಆನೆ ಸೆರೆ ಕಾರ್ಯಾಚರಣೆ ವೇಳೆ ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ ಹುತಾತ್ಮನಾದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ದಸರಾ ಉತ್ಸವದಲ್ಲಿ 8 ಬಾರಿ ಅಂಬಾರಿ ಹೊತ್ತು ಜನರ ಪ್ರೀತಿಗೆ ಪಾತ್ರನಾಗಿದ್ದ ಆನೆಯ ಸಾವು ದೊಡ್ಡ ನಷ್ಟವಾಗಿದೆ.