ಗಾಂಜಾ ಸೇವಿಸುತ್ತಿದ್ದವರ ಬಂಧನ

Arrest of those consuming marijuana
Arrest of those consuming marijuana
Published on
ಚಿಂತಾಮಣಿ: ತಾಲೂಕಿನ ಮುರಗಮಲ್ಲಾ ಗ್ರಾಮದಲ್ಲಿ ಗಾಂಜಾ ಸೇವಿಸುತ್ತಿದ್ದ ಇಬ್ಬರು ಯುವಕರನ್ನು ಕೆಂಚಾರ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೆರೆಗೆ ಪೊಲೀಸರು ದಾಳಿ ನಡೆಸಿದಾಗ ಗಾಂಜಾ ಸೇವಿಸುತ್ತಿರುವುದು ಕಂಡುಬಂದಿದೆ. ಚಿಂತಾಮಣಿಯ ಶ್ರೀರಾಮ ನಗರದ ನಿವಾಸಿ ಶಹಬಾಜ್​ ಪಾಷಾ(26) ಮತ್ತು ಆಶ್ರಯ ಬಡಾವಣೆಯ (23) ಫಯಾಜ್​ ಅವರನ್ನು ಬಂಧಿಸಿ, ಗಾಂಜಾ ಮತ್ತು ಸಂಬಂಧಿಸಿದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳು ನಗರದಲ್ಲಿ ಅಪರಿಚಿತ ವ್ಯಕ್ತಿಯಿಂದ 300 ರೂ. ನೀಡಿ ಗಾಂಜಾ ಪಡೆದು ಸೇವಿಸುತ್ತಿರುವುದಾಗಿ ವಿಚಾರಣೆಯಲ್ಲಿ ಹೇಳಿದ್ದಾರೆ. ಕೆಂಚಾರ್ಲಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net