ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದವರ ಬಂಧನ

 ಸಂಪಿಗೆಪುರ ಸಮೀಪ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಆಟೋವನ್ನು ಎಚ್.ಕೆ.ನವೀನ್ ಹಾಗೂ ಸಿಬ್ಬಂದಿ ವಶಕ್ಕೆ ಪಡೆದಿರುವುದು.
ಸಂಪಿಗೆಪುರ ಸಮೀಪ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದ ಆಟೋವನ್ನು ಎಚ್.ಕೆ.ನವೀನ್ ಹಾಗೂ ಸಿಬ್ಬಂದಿ ವಶಕ್ಕೆ ಪಡೆದಿರುವುದು.
Published on

ಪ್ರಮುಖ ಮುಖ್ಯಾಂಶಗಳು

  • ಪಟ್ಟಣ ಹಾಗೂ ತಾಲೂಕಿನ ಬೇಗೂರು ವ್ಯಾಪ್ತಿ
  • ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದವರ
ಗುಂಡ್ಲುಪೇಟೆ: ಪಟ್ಟಣ ಹಾಗೂ ತಾಲೂಕಿನ ಬೇಗೂರು ವ್ಯಾಪ್ತಿಯಲ್ಲಿ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿ ಸಾಗಿಸುತ್ತಿದ್ದವರನ್ನು ಪೊಲೀಸರು ಮಾಲು ಸಮೇತ ಬಂಧಿಸಿದ್ದಾರೆ.
ಬೇಗೂರು ಠಾಣೆ ವ್ಯಾಪ್ತಿಯ ಸಂಪಿಗೆಪುರ ಸಮೀಪ ಆಟೋದಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಾಗಣೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಸಬ್ ಇನ್‌ಸ್ಪೆಕ್ಟರ್ ಎಚ್.ಕೆ.ನವೀನ್ ಹಾಗೂ ಸಿಬ್ಬಂದಿ ದಾಳಿ ನಡೆಸಿದರು. ಮಂಡ್ಯದ ಕಲ್ಕುಣಿ ನಿವಾಸಿ ಮಹಮದ್ ಜಿಯಾಉಲ್ಲಾ(29) ಎಂಬಾತನನ್ನು ಬಂಧಿಸಲಾಗಿದ್ದು, ಗೂಡ್ಸ್ ಆಟೋದಲ್ಲಿ ಸಾಗಿಸುತ್ತಿದ್ದ 30,000 ರೂ.ಮೌಲ್ಯದ 20 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಪಟ್ಟಣ ಪೊಲೀಸರಿಗೆ ಬಂದ ಮಾಹಿತಿ ಮೇರೆಗೆ ಸರ್ಕಲ್ ಇನ್‌ಸ್ಪೆಕ್ಟರ್ ಎನ್.ಜಯಕುಮಾರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮಹದೇವಪ್ರಸಾದ್ ನಗರ ಬಡಾವಣೆಯ ನಿವೇಶನವೊಂದರಲ್ಲಿ ಸಂಗ್ರಹಿಸಿದ್ದ 32 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ವಶಕ್ಕೆ ಪಡೆದು ನಿವೇಶನದ ಮಾಲೀಕನ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net