ಮಧುಗಿರಿ:ಕಲೆಗೆ ಜನರನ್ನು ಒಂದು ಗೂಡಿಸುವ ಶಕ್ತಿ ಇದೆ ಎಂದು ಹಿರಿಯ ಸಾಹಿತಿ, ನಾಡೋಜ ಬರಗೂರು ರಾಮಚಂದ್ರಪ್ಪ ತಿಳಿಸಿದರು. ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸತಿಕ ಸ್ಪರ್ಧೆ ಕಾರ್ಯಕ್ರಮಉದ್ಘಾಟಿಸಿ ಮಾತನಾಡಿದ ಅವರು, ಸಾಂಸತಿಕ ಸ್ಪರ್ಧೆಗಳಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಕಲೆಯನ್ನು ಹೊರಹಮ್ಮಿಸಲು ಸಾಧ್ಯ. ಪ್ರಾಧ್ಯಾಪಕರು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಬೇಕಿದೆ. ಶಿಕ್ಷಣದಿಂದ ಮಾತ್ರ ಮನ್ನಣೆ, ಗೌರವ ಸಿಗುತ್ತದೆ. ಶಿಕ್ಷಣ ಇಂದು ಉದ್ಯಮ ಮತ್ತು ವಾಣಿಜ್ಯ ಕ್ಷೇತ್ರವಾಗಿ ಮಾರ್ಪಟ್ಟಿರುವುದುದುರಂತ ಎಂದು ವಿಷಾದ ವ್ಯಕ್ತಪಡಿಸಿದರು.
ಕವಿ ಹಾಗೂ ಸಂಶೋಧಕ ಡಾ.ವಡ್ಡಗೆರೆ ನಾಗರಾಜಯ್ಯ ಮಾತನಾಡಿ, ಸಾಂಸತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಗೊಳ್ಳುತ್ತದೆ. ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ದೊರಕಿಸಲು ಸಾಧ್ಯ ಎಂದರು.
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ.ಬಾಲ ಗುರುಮೂರ್ತಿ ಮಾತನಾಡಿ, ಪದವಿ ಪೂರ್ವ ಶಿಕ್ಷಣ ಜೀವನವನ್ನು ನಿರ್ಧರಿಸುತ್ತದೆ. ನಿಜವಾದ ಜೀವನ ಪ್ರಾರಂಭವಾಗುವುದು ಇಲ್ಲಿಂದ. ಪದವಿ ಪೂರ್ವ ಶಿಕ್ಷಣದಿಂದ ಹೊಸ ಬದಲಾವಣೆ ಕಾಣಬಹುದು ಎಂದರು. ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ನೇರಂ ನಾಗರಾಜು ಮಾತನಾಡಿ, ಪಿಯುಸಿ ವಿದ್ಯಾರ್ಥಿಗಳ ಒತ್ತಡದ ಜೀವನದಲ್ಲಿ ಸಾಂಸತಿಕ ಸ್ಪರ್ಧೆಗಳು ಅತ್ಯವಶ್ಯ. ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಸಂಘದ ಅಧ್ಯಕ್ಷ ಪರಮೇಶ್ವರಪ್ಪ, ಪ್ರಾಂಶುಪಾಲರಾದ ವೇದಮೂರ್ತಿ, ಕೃಷ್ಣಮೂರ್ತಿ, ಎಂ.ಕೆ.ಲತಾ, ಶಂಭುಲಿಂಗೇಶ್, ಈಶ್ವರಯ್ಯ, ಲಕ್ಷಿ$್ಮ ಭಟ್ ಇತರರು ಇದ್ದರು.