ಅಂಬಾ ಕ್ರಿಪಾ ನೃತ್ಯ ನಿಕೇತನ ತಂಡದಿಂದ ಕಲಾವಿದರು ಹಲವು ಅರೆ ಶಾಸ್ತ್ರೀಯ ಗೀತೆಗಳಿಗೆ ಸಮೂಹ ನೃತ್ಯ ಮಾಡಿ ಸಭಿಕರನ್ನು ರಂಜಿಸಿದರು. ಇನ್ನು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರು ಸಹ "ಗುಲಾಬಿ ಆಂಕೆ ಜೋ ತೇರಿ ದೇಕೆ" ಹಾಡಿ ಗಮನ ಸೆಳೆದರು.ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಮಹಾನಗರ ಪಾಲಿಕೆ ಮೇಯರ್ ವರ್ಷಾ ರಾಜೀವ ಜಾನೆ, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸುಲು, ಯಾದಗಿರಿ ಜಿಲ್ಲಾ ಪಂಚಾಯತ್ ಸಿ.ಇ.ಓ ಲವೀಶ್ ಒರಡಿಯಾ, ಸಹಾಯಕ ಆಯುಕ್ತೆ ಸಾಹಿತ್ಯ ಆಲದಕಟ್ಟಿ, ತಹಶೀಲ್ದಾರ ಕೆ.ಆನಂದಶೀಲ ಸೇರಿದಂತೆ ಅನೇಕ ಅಧಿಕಾರಿಗಳು, ಸಾರ್ವಜನಿಕರು ಸಂಗೀತ ರಸಮಂಜರಿಗೆ ಸಾಕ್ಷಿಯಾದ್ದರು.