ಕಲಬುರಗಿ ಕೇಂದ್ರ ಬಸ್ ನಿಲ್ದಾಣದಿಂದ ವಿಮಾನ ನಿಲ್ದಾಣ ಬಸ್ ಸೇವೆಗೆ ಚಾಲನೆ ನೀಡಿದ ಅರುಣಕುಮಾರ ಪಾಟೀಲ್

,
,
Published on
ಕಲಬುರಗಿ: ಕೆ.ಕೆ.ಆರ್.ಟಿ.ಸಿ ಸಂಸ್ಥೆಯಿಂದ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣ-ಕಲಬುರಗಿ ವಿಮಾನ ನಿಲ್ದಾಣ ನಡುವಿನ ಬಸ್ ಸೇವೆಗೆ ಕೇಂದ್ರ ಬಸ್ ನಿಲ್ದಾಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಅರುಣಕುಮಾರ ಪಾಟೀಲ ಅವರು ಹಸಿರು ಧ್ವಜ ತೋರಿಸುವ ಮೂಲಕ ಇಂದು ಚಾಲನೆ ನೀಡಿದರು.
ಕಲಬುರಗಿ ಮತ್ತು ಬೆಂಗಳೂರು ನಡುವೆ ವಿಮಾನ ಸೇವೆಗಳು ಪುನರಾರಂಭಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ ಟಿಸಿ) ವತಿಯಿಂದ ನಗರದ ಪ್ರಮುಖ ಕೇಂದ್ರಗಳಿಂದ ವಿಮಾನ ನಿಲ್ದಾಣಕ್ಕೆ ನೂತನ ಸಿಟಿ ಬಸ್ ಸೇವೆಯನ್ನು ಆರಂಭಿಸಲಾಗಿದೆ ಎಂದು ಹೇಳಿದರು.
ಈ ಕುರಿತು ಮಾಹಿತಿ ನೀಡಿದ ಅರುಣಕುಮಾರ ಎಂ.ವೈ. ಪಾಟೀಲ್ ಅವರು "ವಿಮಾನ ಪ್ರಯಾಣಿಕರು ಮಾತ್ರವಲ್ಲದೆ ಸಾರ್ವಜನಿಕರು ಕೂಡ ಈ ಸೇವೆಯ ಸದುಪಯೋಗ ಪಡೆದುಕೊಳ್ಳಬೇಕು ಖಾಸಗಿ ವಾಹನಗಳ ವೆಚ್ಚಕ್ಕೆ ಹೋಲಿಸಿದರೆ ಈ ಬಸ್ ಸೇವೆ ಅತ್ಯಂತ ಕಡಿಮೆ ದರದಲ್ಲಿ ಲಭ್ಯವಿದ್ದು, ಸಾರ್ವಜನಿಕರ ಹಣ ಉಳಿತಾಯವಾಗಲಿದೆ," ಎಂದು ತಿಳಿಸಿದರು
ಬಸ್ ಸಂಚಾರದ ವಿವರ:
ಈ ವಿಶೇಷ ಬಸ್ ಪ್ರತಿದಿನ ಬೆಳಿಗ್ಗೆ 6:10 ಗಂಟೆಗೆ ಕಲಬುರಗಿ ಕೇಂದ್ರೀಯ ಬಸ್ ನಿಲ್ದಾಣದಿಂದ ಹೊರಟು ನಗರದ ಪ್ರಮುಖ ರಸ್ತೆಗಳಾದ ವಲ್ಲಭಭಾಯಿ ಸರ್ಕಲ್, ಅನ್ನಪೂರ್ಣ ಕ್ರಾಸ್ ಮಾರ್ಗವಾಗಿ 7:00 ಗಂಟೆಗೆ ವಿಮಾನ ನಿಲ್ದಾಣ ತಲುಪಲಿದೆ. ಹಾಗೆಯೇ ಬೆಳಿಗ್ಗೆ 8:00 ಗಂಟೆಗೆ ವಿಮಾನ ನಿಲ್ದಾಣದಿಂದ ಹೊರಟು ಕಲಬುರಗಿ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಆಗಮಿಸಲಿದೆ.ಪ್ರಯಾಣಿಕರ ಅಗತ್ಯಕ್ಕೆ ತಕ್ಕಂತೆ ಟ್ರಿಪ್ ಗಳ ಸೇವೆಯನ್ನು ಒದಗಿಸಲು ಸಂಸ್ಥೆ ಯೋಜಿಸಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಲಬುರಗಿ -1 ವಿಭಾಗೀಯ ನಿಯಂತ್ರಣಾಧಿಕಾರಿ ಎಸ್. ಜಿ .ಗಂಗಾಧರ್ ಹಾಗೂ ಕಲಬುರಗಿ -2 ಬಸಂತಪ್ಪ ಬಿ ಎಮ್ , ವಿಭಾಗೀಯ ಮೆಕ್ಯಾನಿಕಲ್ ಇಂಜಿನಿಯರರು ಶೇಖ್ ಹುಸೇನಿ, ಪ್ರಶಾಂತ, ಡಿಪೋ ಮ್ಯಾನೇಜರ್ ಅನಿಲ, ಆಡಳಿತಾಧಿಕಾರಿ ಗುರುಲಿಂಗಪ್ಪ , ಡಿಟಿಓ ಹೊಸಮನಿ ಸೇರಿದಂತೆ ಕೆಕೆಆರ್ ಟಿಸಿ ಅಧಿಕಾರಿಗಳು, ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net